ಕೋವಿಡ್ ನ ಹೊಸ ರೂಪಾಂತರಿ ಹಿನ್ನೆಲೆ ; ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರಿಗೆ ಆರ್ ಟಿಪಿಸಿಆರ್ ಕಡ್ಡಾಯ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. – ಕಹಳೆ ನ್ಯೂಸ್
ಮಂಗಳೂರು, ನ. 29 : ಕೋವಿಡ್ ನ ಹೊಸ ರೂಪಾಂತರಿ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು, ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದ್ದು, ಮೂರು ಪಾಳಿಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೋಮವಾರದಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ತಲಪಾಡಿ ಸೇರಿದಂತೆ ಎಲ್ಲಾ ಗಡಿಗಳಲ್ಲಿ ತಪಾಸಣೆ ಆರಂಭಗೊಂಡಿದೆ. ಸೋಮವಾರದಿಂದ ಇತರ ಇಲಾಖೆಗಳ ಸಿಬ್ಬಂದಿಗಳನ್ನು...







