ತೃತೀಯ ಭಾಷಾ ವಿವಾದಕ್ಕೆ ಈಗ ರಾಜ್ಯಪಾಲರ ಪ್ರವೇಶ -ಕಹಳೆ ನ್ಯೂಸ್
ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಮರು ಪರಿಶೀಲಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದು ಹಿಂದಿ ವಿವಾದಕ್ಕೆ ಈಗ ಮತ್ತೊಂದು ತಿರುವು ಲಭ್ಯವಾಗಿದೆ. ಈ ಸಂಬಂಧ ಲೋಕ ಭವನದಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಲಾಗಿದ್ದು ಈ ನಿರ್ಧಾರವನ್ನು ಸಮಗ್ರವಾಗಿ ಪರಿಶೀಲಿಸಿ...







