ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರ್ಕಾರ – ಕಹಳೆ ನ್ಯೂಸ್
ಬೆಂಗಳೂರು : ಕರ್ನಾಟಕದ ಸರ್ಕಾರವು ಕ್ರಿಸ್‌ಮಸ್ ಹಾಗೂ ಹೊಸ ವರ್ಷಕ್ಕೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಚರ್ಚ್ ಗಳಲ್ಲಿ ಹಾಗೂ ಹೋಟೆಲ್, ಮಾಲ್ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಸಾರ್ವಜನಿಕರು ಸರಳವಾಗಿ ಮತ್ತು ಸುರಕ್ಷಿತವಾಗಿ ಹಬ್ಬ ಆಚರಿಸಬೇಕೆಂದು ವಿನಂತಿಸುತ್ತೇನೆ ಎಂದು ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ಮಾರ್ಗಸೂಚಿಗಳು ಇಂತಿವೆ :- *ಕ್ರೈಸ್ತ ಧರ್ಮದ ಚರ್ಚ್‌ಗಳಲ್ಲಿ...







