ಮಾಸ್ಕ್ ಧರಿಸದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಹೈಕೋರ್ಟ್ -ಕಹಳೆ ನ್ಯೂಸ್
ಬೆಂಗಳೂರು: ಮಾಸ್ಕ್ ಧರಿಸದ ಮತ್ತು ಅಂತರ ಕಾಪಾಡದವರ ವಿರುದ್ಧ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಹೇಳಿದೆ. ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 35 ಪ್ರತಿಭಟನೆಗಳು ನಡೆದಿವೆ. ಮಾಸ್ಕ್ ಧರಿಸಬೇಕು, ಅಂತರ ಕಾಪಾಡಿಕೊಳ್ಳಬೇಕು ಎಂಬ ನಿಯಮ ಇಲ್ಲಿ ಪಾಲನೆಯೇ ಆಗಿಲ್ಲ. ಈ ರೀತಿಯ ಪ್ರತಿಭಟನೆಗಳನ್ನು ನಿರ್ಬಂಧಿಸಬೇಕು ಎಂದು ಕೋರಿ ಸಾಯಿದತ್ತ ಸಲ್ಲಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ...







