ಡ್ರಗ್ಸ್ ಕೇಸ್ :ಮತ್ತೊಬ್ಬ ಆರೋಪಿ ಅರೆಸ್ಟ್-ಕಹಳೆ ನ್ಯೂಸ್
ಬೆಂಗಳೂರು, ಅ.13- ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ. ಅಶ್ವಿನ್ ಭೋಗಿ ಬಂಧಿತ ಆರೋಪಿ. ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದಂತೆ ಕಾಟನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಈತ 9ನೇ ಆರೋಪಿ.ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾದ ನಂತರ ಅಶ್ವಿನ್ ತಲೆಮರೆಸಿಕೊಂಡಿದ್ದ. ಈತನ ಬಂಧನಕ್ಕಾಗಿ ಸಿಸಿಬಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದರು. ಚಿಕ್ಕಮಗಳೂರಿನಲ್ಲಿ ಅಶ್ವಿನ್ ಇರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರ...







