ಶಾಲೆ ಆರಂಭದ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ :ಯಡಿಯೂರಪ್ಪ – ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಸಚಿವರ ಸಮ್ಮುಖದಲ್ಲಿ ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆಸುತ್ತೇವೆ. ಸಚಿವರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು...






