ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ; ಒಂದೇ ದಿನ ರಾಜ್ಯದಲ್ಲಿ 5 ಸಾವಿರಕ್ಕೂ ಅಧಿಕ ಸೋಂಕು ಪತ್ತೆ – ಬರೋಬ್ಬರಿ 97 ಮಂದಿ ಬಲಿ – ಕಹಳೆ ನ್ಯೂಸ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 97 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1616ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 47 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 97 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2207...







