ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; 24 ಮೀನುಗಾರರ ರಕ್ಷಣೆ – ಕಹಳೆ ನ್ಯೂಸ್
ಕಾರವಾರ: ಮೀನುಗಾರಿಕಾ ಬೋಟ್ ಮುಳುಗಡೆಯಾಗುತ್ತಿದ್ದ ವೇಳೆ ಅದರಲ್ಲಿದ್ದ 24 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರೆ ಬೋಟ್‌ಗಳ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ರಕ್ಷಿಸಿದ ಘಟನೆ ಕಾರವಾರದ ಅರಬ್ಬಿ ಸಮುದ್ರ ಭಾಗದ ಅಂಜದೀವ್ ದ್ವೀಪದ ಸಮೀಪ ನಡೆದಿದೆ. ಬೆಳಂಬರ್ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ‘ಶ್ರೀ ಮಾತಾ’ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಅವಘಡಕ್ಕೀಡಾಗಿ ಮುಳುಗಡೆಯಾಗಿತ್ತು. ವಿಷಯ ತಿಳಿದ ತಕ್ಷಣ ಸಮೀಪದಲ್ಲಿದ್ದ ಐದಾರು ಮೀನುಗಾರಿಕಾ ಬೋಟ್‌ಗಳು ಸ್ಥಳಕ್ಕೆ ಧಾವಿಸಿ, ಬೋಟ್‌ನಲ್ಲಿದ್ದ ಎಲ್ಲಾ 24...







