ಮದುವೆಯಾಗುವಂತೆ ಒತ್ತಾಯ : ಪ್ರೇಯಸಿಯನ್ನು ಕೊಂದು ಗೋಣಿ ಚೀಲದಲ್ಲಿ ಶವ ಬಚ್ಚಿಟ್ಟು ಪ್ರಿಯಕರ ಪರಾರಿ – ಕಹಳೆ ನ್ಯೂಸ್
ಹೈದರಾಬಾದ್: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಪ್ರೇಯಸಿಯನ್ನು 21 ವರ್ಷದ ಯುವಕನೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಬಳಿಕ ಆಕೆಯ ಮೃತದೇಹವನ್ನು ಗೋಣಿ ಚೀಲದಲ್ಲಿ ಬಚ್ಚಿಟ್ಟು ಪರಾರಿಯಾಗಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಮೃತ ಯುವತಿಯನ್ನು ಬಿಹಾರ ಮೂಲದ ರೆಹಾನಾ ಎಂದು ಗುರುತಿಸಲಾಗಿದೆ. ರೆಹಾನಾ ಹೈದರಾಬಾದ್ನ ಬ್ಯಾಂಕ್ವೆಟ್ ಹಾಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬಿಹಾರ ಮೂಲದವರೇ ಆಗಿರುವ 21 ವರ್ಷದ ಅಹ್ಮದ್ ಸಲಾಂ ಎಂಬಾತನೊಂದಿಗೆ ರೆಹಾನಾ ಕಳೆದ ಒಂದು ವರ್ಷದಿಂದ ಸಂಬಂಧದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ....







