Saturday, March 14, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ತಗ್ಗಿದ ಮಳೆಯ ಅಬ್ಬರ: ಆದರೂ ನಾಲ್ಕು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ತಗ್ಗಿದ್ದು, ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮೀಸೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಕರ್ನಾಟಕದಲ್ಲಿ ‘RSS’ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಚಿಂತನೆ – ಕಹಳೆ ನ್ಯೂಸ್

ಬೆಂಗಳೂರು : ಆರ್ ಎಸ್ ಎಸ್ ನೂರು ವರ್ಷ ಭರ್ತಿ ಬೆನ್ನಲ್ಲೇ ಬಿಗ್ ಶಾಕ್ ಎದುರಾಗಿದ್ದು, ಆರ್ ಎಸ್ ಎಸ್ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಬ್ರಿಕ್ ಹಾಕುತ್ತಾ? ಎನ್ನುವ ಕುರಿತು ಚಿಂತನೆ ನಡೆಯುತ್ತಿದೆ. ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧದ ಬಗ್ಗೆ ಗಂಭೀರ ಚಿಂತನೆ ನಡೆಯುತ್ತಿದೆ. ಸಾರ್ವಜನಿಕ ಸರಕಾರಿ ಸ್ಥಳಗಳಲ್ಲಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಹೌದು ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣದ...
ಆರೋಗ್ಯಬೆಂಗಳೂರುರಾಜ್ಯಸಿನಿಮಾಸುದ್ದಿ

ನಟ ಉಮೇಶ್ ಆರೋಗ್ಯ ವಿಚಾರಿಸಿದ ಹಿರಿಯ ಕಲಾವಿದರು-ಕಹಳೆ ನ್ಯೂಸ್

ಹಿರಿಯ ನಟ ಎಂಎಸ್ ಉಮೇಶ್  ಮನೆಯಲ್ಲಿ ಕಾಲುಜಾರಿ ಬಿದ್ದು ಸೊಂಟ ಹಾಗೂ ಬಲಗೈ ಭುಜಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಹಿರಿಯ ನಟ ಉಮೇಶ್ ಅವರಿಗೆ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನಿಂಗ್ ಮಾಡಿದ ಬಳಿಕ ಲಿವರ್‌ನಲ್ಲಿ ಘನಗಾತ್ರದ ಗೆಡ್ಡೆ ಪತ್ತೆಯಾಗಿದೆ. ಲಿವರ್ ಕ್ಯಾನ್ಸರ್ ಆಗಿ ಅದು ಬೇರೆ ಬೇರೆ ಅಂಗಗಳಿಗೆ ಹರಡಿದೆ ಎಂದು ಶಾಂತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ...
ಬೆಂಗಳೂರುರಾಜ್ಯಸುದ್ದಿ

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ, ಸಂಚಾರದಲ್ಲಿ ವ್ಯತ್ಯಯ-ಕಹಳೆ ನ್ಯೂಸ್

ಬೆಂಗಳೂರು: ಹೊಸದಾಗಿ ಆರಂಭಗೊಂಡಿರುವ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ ಪ್ರತಿ 25 ನಿಮಿಷಕ್ಕೆ ಒಂದರಂತೆ ರೈಲುಗಳು ಸಂಚಾರ ನಡೆಸುತ್ತಿವೆ. ಸಾರ್ವಜನಿಕರು ಸಹಕರಿಸಬೇಕೆಂದು ಬಿಎಂಆರ್‌ಸಿಎಲ್‌ ಮನವಿ ಮಾಡಿದೆ. ಆರ್‌ವಿ ಕಾಲೇಜ್‌ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಾಗುವ ಹಳದಿ ಮಾರ್ಗದ ಮೆಟ್ರೋ ಸೇವೆಗೆ ಇದೇ ಆಗಸ್ಟ್‌ 10 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. 19.15 ಕಿ.ಮೀ ಉದ್ದದ ಹಳದಿ ಮಾರ್ಗದಲ್ಲಿ ಒಟ್ಟು 16...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂಪಾಯಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಲಾಲ್ ಬಾಗ್ ನಲ್ಲಿ ನಾಗರೀಕರ ಜತೆ ನಡಿಗೆ ಹಾಗೂ ಸಂವಾದದ ನಂತರ ಟನಲ್ ರಸ್ತೆಗೆ ಪ್ರವೇಶ ಜಾಗ ಪರಿಶೀಲನೆ ನಡೆಸಿ ಮಾತನಾಡಿದ ಡಿಸಿಎಂ, ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ ಸಲಹೆ, ದೂರು ಆಲಿಸಿದ್ದೇನೆ. ಅವರ ಸಮಸ್ಯೆ ಬಗೆಹರಿಸಲಾಗುವುದು. ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ...
ಜಮ್ಮು ಮತ್ತು ಕಾಶ್ಮೀರರಾಜ್ಯಸುದ್ದಿ

ಜಮ್ಮು-ಕಾಶ್ಮೀರದ ಸಾಂಬಾ ಗಡಿಯಲ್ಲಿ ಕಾಣಿಸಿಕೊಂಡ ಪಾಕ್ ಡ್ರೋನ್; ಶೋಧ ಚುರುಕು – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಇರುವ ಹಳ್ಳಿಗಳ ಮೇಲೆ ಎರಡು ಪಾಕಿಸ್ತಾನಿ ಡ್ರೋನ್‌ಗಳು ಸುಳಿದಾಡುತ್ತಿರುವುದು ಕಂಡುಬಂದಿದ್ದು, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ತಡರಾತ್ರಿ ಘಗ್ವಾಲ್ ಪ್ರದೇಶದ ಚಲ್ಲಿಯಾರಿ ಗ್ರಾಮ ಮತ್ತು ರಾಮಗಢದ ಚಮ್ಲಿಯಾಲ್ ಗ್ರಾಮದ ಮೇಲೆ ಡ್ರೋನ್‌ಗಳು ಕಾಣಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರೊಂದಿಗೆ ಸೇರಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್)ಎರಡೂ ಪ್ರದೇಶಗಳನ್ನು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು...
ಜಿಲ್ಲೆದೆಹಲಿರಾಜ್ಯಸುದ್ದಿ

ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಅನಾಹುತ – ಕಹಳೆ ನ್ಯೂಸ್

ನವದೆಹಲಿ: ಹಕ್ಕಿ ಡಿಕ್ಕಿಯಾದ ಪರಿಣಾಮ ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನ ದೆಹಲಿಯ ವಿಮಾನ ನಿಲ್ದಾಣಕ್ಕೆ ವಾಪಸ್ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವನ್ನು ಎಂಜಿನಿಯರಿಂಗ್ ತಂಡವು ತಪಾಸಣೆ ನಡೆಸುತ್ತಿದ್ದು, ಪರಿಶೀಲನೆ ಬಳಿಕ ಸೇವೆಗೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. 'ಅಕ್ಟೋಬರ್ 10ರಂದು ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ (QP 1607) ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನವು ಸುರಕ್ಷಿತವಾಗಿ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ'...
ಬೆಂಗಳೂರುರಾಜ್ಯಸುದ್ದಿ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 12ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಏಳು ದಿನಗಳ ಅಲರ್ಟ್ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಕೋಲಾರದಲ್ಲಿ ಎರಡು ದಿನಗಳ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌  ನೀಡಲಾಗಿದೆ. ರಾಜ್ಯದ ಹಲವೆಡೆ ಇಂದು ದಿನವಿಡೀ ಮೋಡ ಕವಿದ ವಾತಾವರಣ ಮುಂದುವರಿಯುತ್ತದೆ ಎನ್ನಲಾಗಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಪ್ರದೇಶಗಳಲ್ಲಿ...
1 54 55 56 57 58 273
Page 56 of 273