ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಟ್ರಂಪ್ ನಡೆ ಶ್ಲಾಘನೀಯ: ಪ್ರಧಾನಿ ಮೋದಿ -ಕಹಳೆ ನ್ಯೂಸ್
ನವದೆಹಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಧನಾತ್ಮಕ ನಡೆಯನ್ನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ ಹಾಗೂ ಅಮೆರಿಕ ನಡುವೆ ವಿಶೇಷ ಬಾಂಧವ್ಯವಿದೆ, ನನಗೂ ಮೋದಿಗೂ ಉತ್ತಮ ಸ್ನೇಹ ಸಂಬಂಧವಿದೆ. ಸ್ವಲ್ಪ ಕಾಯಿರಿ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆ ಬೆನ್ನಲ್ಲೇ ಮೋದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹೀಗೆ ಬರೆದುಕೊಂಡಿದ್ದಾರೆ. 'ಡೊನಾಲ್ಡ್ ಟ್ರಂಪ್ ಅವರ ಭಾವನೆಗಳನ್ನು ಮತ್ತು ನಮ್ಮ ಸಂಬಂಧಗಳ...







