Tuesday, March 17, 2026

ರಾಜ್ಯ

ಜಿಲ್ಲೆರಾಜ್ಯಸುದ್ದಿ

ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು ಒಳಗೊಳಗೆ ಕತ್ತಿ ಮಸೆಯುತ್ತಿದ್ದಾರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ -ಕಹಳೆ ನ್ಯೂಸ್

ಕಲಬುರ್ಗಿ : ಮೈಸೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸಾಧನಾ ಸಮಾವೇಶ ಮಾಡುತ್ತಿರುವ ವಿಚಾರವಾಗಿ ಸಿದ್ದರಾಮಯ್ಯ ಕುರ್ಚಿ ಅಲ್ಲಾಡುವಾಗ ಈ ರೀತಿ ಸಮಾವೇಶ ಮಾಡುತ್ತಾರೆ. ಅಸ್ಥಿರತೆ ಕಾಡಿದಾಗೆಲ್ಲ ಈ ರೀತಿ ಸಮಾವೇಶ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯೇಂದ್ರ ಹೇಳಿಕೆ ನೀಡಿದರು. ಕಲ್ಬುರ್ಗಿಯಲ್ಲಿ ಮಧ್ಯಮಾಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ ಅವರು, ತಮ್ಮ ಅಸ್ತಿತ್ವಕ್ಕಾಗಿ ಸಿದ್ದರಾಮಯ್ಯ ಸಮಾವೇಶ ಮಾಡುತ್ತಾರೆ. ಶಾಸಕರ ಅಸಮಾಧಾನ ಶಮನ ಮಾಡಲು ಸುರ್ಜೆವಾಲಾ ಪ್ರಯತ್ನಿಸುತ್ತಾರೆ. ಕಾಂಗ್ರೆಸ್ ನಲ್ಲಿ ಒಳಗೊಳಗೆ ಕುದುರೆ ವ್ಯಾಪಾರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಕಾಲ್ತುಳಿತದಿಂದ 11 ಜನರ ಸಾವು ಪ್ರಕರಣ : ಜು.21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ -ಕಹಳೆ ನ್ಯೂಸ್

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ 11 RCB ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ವಿಚಾರವಾಗಿ ಸಿಎಟಿ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ನ್ಯಾ. ಎಸ್ ಜಿ ಪಂಡಿತ್ ಹಾಗು ನ್ಯಾ.ಟಿಎಂ ನದಾಫ್ ಅವರ ಪೀಠದಲ್ಲಿ ವಿತರಣೆ ನಡೆಯಿತು. ವಿಕಾಸ್ ಕುಮಾರ್ ಪರವಾಗಿ ಹಿರಿಯ ವಕೀಲ ಧ್ಯಾನ ಚಿನ್ನಪ್ಪ ವಾದ ಮಂಡಿಸಿದರು....
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ತಾಂತ್ರಿಕ ದೋಷ; ದೆಹಲಿ ನಿಲ್ದಾಣದಲ್ಲಿ ‘ಇಂಡಿಗೋ ವಿಮಾನ’ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ನವದೆಹಲಿ : ಇಂಫಾಲ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ಸಣ್ಣ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿಗೆ ಹಿಂತಿರುಗಬೇಕಾಯಿತು ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಫಾಲ್‌ಗೆ ಹೊರಟಿದ್ದ 6E5118 ವಿಮಾನದ ಪ್ರಯಾಣದ ಸ್ವಲ್ಪ ಸಮಯದ ಬಳಿಕ ತಾಂತ್ರಿಕ ದೋಷ ಕಂಡುಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೈಲಟ್‌ಗಳು ವಿಮಾನವನ್ನು ದೆಹಲಿಗೆ ಯು-ಟರ್ನ್ ಮಾಡಿದ್ದಾರೆ.   ದೆಹಲಿಯಿಂದ ಇಂಫಾಲ್‌ಗೆ ಕಾರ್ಯನಿರ್ವಹಿಸುತ್ತಿದ್ದ 6E...
ಆರೋಗ್ಯಬೆಂಗಳೂರುರಾಜ್ಯಸಂತಾಪಸುದ್ದಿ

ರಾಜ್ಯದಲ್ಲಿ ಮುಂದುವರೆದ ಹೃದಯಾಘಾತ ಸರಣಿ: ಹಾವೇರಿಯಲ್ಲಿ ಶಾಲಾ ಬಸ್ ಚಾಲಕ ಸಾವು.! -ಕಹಳೆ ನ್ಯೂಸ್

ಹಾವೇರಿ : ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದ್ದು, ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪಕ್ಕಿರೇಶ ಮಲ್ಲೇಶಣ್ಣನವರ್ (25) ಎಂದು ಗುರುತಿಸಲಾಗಿದೆ. ಶಾಲೆಯ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ ಮಕ್ಕಳನ್ನ ಮನೆಗೆ ಬಿಡುವ ವೇಳೆ ಧಿಡೀರ್ ಆಗಿ ಹೃದಯಾಘಾತ ಕಾಣಿಸಿಕೊಂಡಿದೆ. ನಂತರ ಮಕ್ಕಳ ಚೀರಾಟ ಕೇಳಿ ಸ್ಥಳೀಯರು...
ಉಡುಪಿಕಾರ್ಕಳಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾರ್ಳಕದ ಪರಶುರಾಮನ ಮೂರ್ತಿ ಫೈಬರ್ ಎಂದ ಕಾಂಗ್ರೆಸ್ ನಾಯಕರಿಗೆ ಮುಖಭಂಗ ; ಪೊಲೀಸರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ, ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಕಾರ್ಕಳ : ಮಾಜಿ ಸಚಿವ, ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಕನಸಿನ ಯೋಜನೆ ಉಮ್ಮಿಕಲ್ ಬೆಟ್ಟದ ಮೇಲೆನ ಪರಶುರಾಮ ಥೀಮ್ ಪಾರ್ಕ್ ಹಾಗೂ ಅಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ವಿವಾದದ ಕೇಂದ್ರವಾಗಿತ್ತು. ಇದೀಗ ಅದನ್ನು ಕಂಚಿನದ್ದಲ್ಲ ಫೈಬರ್ ನದ್ದು ಎಂದು ಅಪಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಗೆ ಮತ್ತೆ ಬಹುದೊಡ್ಡ ಮುಖಭಂಗವಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಪ್ರತಿಮೆಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ....
ಜಿಲ್ಲೆಬೆಂಗಳೂರುರಾಜ್ಯಸಂತಾಪಸುದ್ದಿ

ಹಾಡಿಗೆ ಹೆಜ್ಜೆ ಹಾಕಿತ್ತಿದ್ದಾಗಲೇ ಸೇಲ್ಸ್ ಎಕ್ಸಿಕ್ಯೂಟಿವ್ ಹೃದಯಾಘಾತದಿಂದ ಸಾವು – ಕಹಳೆ ನ್ಯೂಸ್

ಬೆಂಗಳೂರು: ಸಿನಿಮಾ ಹಾಡಿಗೆ ಹೆಚ್ಚೆ ಹಾಕಿತ್ತಿದಾಗಲೇ ಏಕಾಏಕಿ ಕುಸಿದು ಬಿದ್ದ ಸೇಲ್ಸ್ ಎಕ್ಸಿಕ್ಯೂಟಿವ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಯಚೂರು ಮೂಲದ ಲಿಂಗಸಗೂರು ತಾಲೂಕಿನ ಸರ್ಜಾಪುರ ಗ್ರಾಮದ ಬಸವರಾಜ್ (46) ಮೃತ ದುರ್ದೈವಿ. ಖಾಸಗಿ ಕಂಪನಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಕ್ಕಳೊಂದಿಗೆ ವಾಸವಾಗಿದ್ದರು. ಬಸವರಾಜ್ ಕಂಪನಿಯ ಸ್ನೇಹಿತರೊಂದಿಗೆ ರೆಸಾರ್ಟ್ ಗೆ ಹೋಗಿದ್ದಾಗ ಸಿನಿಮಾ ಹಾಡಿಗೆ ಹೆಜ್ಜೆ ಹಾಕುತ್ತಾ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಕಾಲ್ಪನಿಕ ಸುಳ್ಳು ಮಾಹಿತಿ ವರದಿ ಮಾಡಿದ ದೂತ ಸಮೀರ್ ಎಂಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಎಫ್.ಐ.ಆರ್..!! – ಕಹಳೆ ನ್ಯೂಸ್

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾಲ್ಪನಿಕ ವರದಿ ಮಾಡಿರುವ ಆರೋಪಿ ಸಮೀರ್ ಎಂಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಮಹಿಳೆಯರು ಸ್ನಾನ ಮಾಡುವಾಗ ವಿಡಿಯೋ ಮಾಡುತ್ತಿದ್ದ ಕಾಮುಕ ಸೆರೆ – ಕಹಳೆ ನ್ಯೂಸ್

ಬೆಂಗಳೂರು : ಮಹಿಳೆಯರು ಸ್ನಾನ ಮಾಡುವಾಗ ಕದ್ದುಮುಚ್ಚಿ ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಹಾಜ ಮೊಯಿದ್ದೀನ್‌ (24) ಬಂಧಿತ ಆರೋಪಿ. ಈತ ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್‌ ಆಗಿದ್ದು, ನಗರದ ಚನ್ನಸಂದ್ರದಲ್ಲಿ ವಾಸವಾಗಿದ್ದನು. ಕೆಟ್ಟ ಚಾಳಿ ಹೊಂದಿದ್ದ ಈತ ಕಳೆದ ನಾಲ್ಕು ದಿನಗಳ ಹಿಂದೆ ಮನೆಯೊಂದರ ಬಾತ್‌ರೂಂಗೆ ತಾಯಿ -ಮಗಳು ಸ್ನಾನಕ್ಕೆ ಹೋಗಿದ್ದನ್ನು ಗಮನಿಸಿ, ನಂತರ ಕಿಟಕಿ ಮೂಲಕ ಕದ್ದುಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದನು.ಆ...
1 78 79 80 81 82 273
Page 80 of 273