ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ -ಕಹಳೆ ನ್ಯೂಸ್
ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ - ಸಮುದ್ರ ಪಾತ್ರಗಳಲ್ಲಿ...







