Recent Posts

Saturday, September 12, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಸತೀಶ್‌ ಜಾರಕಿಹೊಳಿ ಮನೆಯಲ್ಲಿ 15 ಲಕ್ಷ ಮೌಲ್ಯದ ವಿದೇಶಿ ಹಣ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಮನೆಯಲ್ಲಿ 15 ಲಕ್ಷ ರೂ. ಮೌಲ್ಯದ ವಿದೇಶಿ ಹಣವನ್ನು ಜಾರಿ ನಿರ್ದೇಶನಾಲಯ ಪತ್ತೆ ಮಾಡಿದೆ. ವಿದೇಶದಲ್ಲಿ ಹಣ ಹೂಡಿಕೆ ಆರೋಪ ಹಿನ್ನೆಲೆಯಲ್ಲಿ ಸತೀಶ್‌ ಜಾರಕಿಹೊಳಿ ಅವರ ಮನೆ ಮೇಲೆ ಇ.ಡಿ ದಾಳಿ ನಡೆಸಿತ್ತು. ದಾಳಿ ವೇಳೆ ವಿದೇಶಿ ಹಣ ಪತ್ತೆಯಾಗಿದೆ. ದಾಖಲೆಗಳು ಇಲ್ಲದ 15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಸಿಕ್ಕಿದೆ. ಇದರ ಫೋಟೊವನ್ನು ಇ.ಡಿ ರಿಲೀಸ್‌ ಮಾಡಿದೆ. 5 ದೇಶಗಳ ಕರೆನ್ಸಿ...
ದೆಹಲಿರಾಜ್ಯಸುದ್ದಿ

7 ವರ್ಷಗಳ ಬಳಿಕ ಫಸ್ಟ್‌ ಟೈಮ್‌ ಭಾರತಕ್ಕೆ ಜಿನ್‌ಪಿಂಗ್‌ – ಶೃಂಗಸಭೆಗಾಗಿ ದೆಹಲಿಗೆ ಆಗಮನ – ಕಹಳೆ ನ್ಯೂಸ್

ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ ಬ್ರಿಕ್ಸ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌  ಅವರು ಶನಿವಾರ ನಸುಕಿನ ಜಾವ ನವದೆಹಲಿಗೆ ಆಗಮಿಸಿದ್ದಾರೆ. 2020ರ ಗಲ್ವಾನ್‌ ಘರ್ಷಣೆಯ ಬಳಿಕ 7 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅವರು ಭಾರತಕ್ಕೆ (India) ಭೇಟಿ ನೀಡಿದ್ದು, ಉಭಯ ದೇಶಗಳ ನಡುವಿನ ಉನ್ನತ ಮಟ್ಟದ ಮಾತುಕತೆಗೆ ಈ ಭೇಟಿ ವೇದಿಕೆ ಒದಗಿಸಿದೆ. ಜಾಗತಿಕ ಮಟ್ಟದಲ್ಲಿ ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನ ಸಂಘರ್ಷಗಳು, ವ್ಯಾಪಾರ...
ಬೆಂಗಳೂರುರಾಜ್ಯಸುದ್ದಿ

ಪರಪ್ಪನ ಅಗ್ರಹಾರ ಪೊಲೀಸರಿಂದ ಪ್ರಜ್ವಲ್ ರೇವಣ್ಣಗೆ ಡ್ರಿಲ್ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ ಪ್ರಕರಣದ ತನಿಖೆ   ಚುರುಕುಗೊಂಡಿದೆ. ಮೊಬೈಲ್, ಸಿಮ್ ಹಾಗೂ ಪೆನ್‌ಡ್ರೈವ್ ಸರಬರಾಜು ಮಾಡಿದ ಆರೋಪದಡಿ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಆರೋಪಿಗಳನ್ನು ಎದುರುಬದುರು ಕೂರಿಸಿ ವಿಚಾರಣೆ ನಡೆಸಿದ್ದು, ಪ್ರಜ್ವಲ್ ರೇವಣ್ಣಗೆ ಪೊಲೀಸರು ಡ್ರಿಲ್ ನಡೆಸಿದ್ದಾರೆ. ಜೈಲಿನ ಸೆಲ್‌ನಲ್ಲಿ ಮೊಬೈಲ್ ಬಳಕೆ ಮಾಡಿದ್ದ ಪ್ರಕರಣದಲ್ಲಿ ಇದೀಗ ತನಿಖೆ ಚುರುಕಾಗಿದೆ. ಜೈಲಿನಲ್ಲಿ ನಡೆದ ಸಿಸಿಬಿ ದಾಳಿ ವೇಳೆ ಪ್ರಜ್ವಲ್...
ದೆಹಲಿರಾಜ್ಯಸುದ್ದಿ

ದೆಹಲಿ ಬಿಲ್ಡಿಂಗ್ ಕುಸಿತ ಕೇಸ್ – ಪಿಜಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ, ಗುತ್ತಿಗೆದಾರ ಅರೆಸ್ಟ್ – ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಐದು ಅಂತಸ್ತಿನ ಕಟ್ಟಡವೊಂದು ಕುಸಿದು 7 ಮಂದಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಪಿಜಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ ಹಾಗೂ ಗುತ್ತಿಗೆದಾರರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಸುಧಾಂಶು ಎಂದು ಗುರುತಿಸಲಾಗಿದ್ದು, ಪಿಜಿ ನಿರ್ವಹಣೆ ಮಾಡುತ್ತಿದ್ದ. ಜೊತೆಗೆ ಕಾರ್ಮಿಕ ಗುತ್ತಿಗೆದಾರನಾಗಿದ್ದ ಸನೋಜ್ ಎಂಬಾತನನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈವರೆಗೆ ಒಟ್ಟು ಐವರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ ಬಂಧಿಸಲ್ಪಟ್ಟಿದ್ದ ಪಿಜಿ ಮಾಲೀಕ ಹರಿರಾಮ್ ಬನ್ಸಲ್ ಅವರ...
ಬೆಂಗಳೂರುರಾಜ್ಯಸುದ್ದಿ

ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ರೀಲ್ಸ್‌ ನೋಡುತ್ತಿದ್ದ ವಿಚಾರಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆಚ್‌ಎಎಲ್‌ ವಿಭೂತಿಪುರದಲ್ಲಿ ನಡೆದಿದೆ. ರಾಘವೇಂದ್ರ ಎಂಬಾತ ತನ್ನ ಪತ್ನಿ ಶೃತಿ ಅವರನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ರಾಘವೇಂದ್ರ ಹಾಗೂ ಶೃತಿ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳನ್ನು ದಾವಣಗೆರೆಯಲ್ಲಿರುವ ಅಜ್ಜಿ ಮನೆಯಲ್ಲಿ ಇರಿಸಲಾಗಿತ್ತು. ನಿನ್ನೆ ದಂಪತಿ ಇಬ್ಬರೇ ಮನೆಯಲ್ಲಿ ಇದ್ದ ವೇಳೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ರಾಘವೇಂದ್ರ ಬಿಯರ್...
ಬೆಂಗಳೂರುರಾಜ್ಯಸುದ್ದಿ

POP ಗಣೇಶ ಮಾರಾಟ, ತಯಾರಿಕೆ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್ – ಕಹಳೆ ನ್ಯೂಸ್

ಬೆಂಗಳೂರು: ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಸುತ್ತೋಲೆ ಹೊರಡಿಸಿದೆ. ಪಿಓಪಿ ಗಣೇಶ (POP Ganesh) ಮಾರಾಟ ಹಾಗೂ ತಯಾರಿಕೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಒಂದೊಮ್ಮೆ ಯಾರಾದರೂ ಮಾರಾಟ, ತಯಾರಿಕೆ ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಚ್ಚರಿಕೆ ನೀಡಿದೆ. ಗಣೇಶ ಕೂರಿಸಲು ಆಯೋಜಕರು ಅನುಮತಿ ಪಡೆಯಲು ವಾರ್ಡ್ವಾರು ನೋಡಲ್ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಅರ್ಜಿ ಬಂದ ಒಂದೇ ದಿನದಲ್ಲಿ ಅರ್ಜಿ ಪರಿಶೀಲಿಸಿ ಅನುಮತಿ ನೀಡಲಾಗುವುದು....
ಮುಂಬೈರಾಜ್ಯಸುದ್ದಿ

ಮಹಾರಾಷ್ಟ್ರದಲ್ಲಿ ಟ್ರಕ್, ಪಿಕಪ್ ವಾಹನ ಮುಖಾಮುಖಿ ಡಿಕ್ಕಿ : 6 ಮಂದಿ ದುರ್ಮರಣ – ಕಹಳೆ ನ್ಯೂಸ್

ಮುಂಬೈ: ವೇಗವಾಗಿ ಬಂದ ಟ್ರಕ್ (Truck) ಹಾಗೂ ಪಿಕಪ್ (Pickup) ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ (Maharashtra) ಗೋಂದಿಯಾ (Gondia) ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ತಡರಾತ್ರಿ ನಗ್ರಾ ಪ್ರದೇಶದಲ್ಲಿ ಗೋಂದಿಯಾ-ಬಾಲಾಘಾಟ್ ಮಾರ್ಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಅತಿವೇಗದಲ್ಲಿ ಬಂದ ಟ್ರಕ್ ಪಿಕಪ್ ವಾಹನಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪಿಕಪ್‌ನಲ್ಲಿ ಪ್ರಯಾಣಿಸುತ್ತಿದ್ದ ಆರು...
ಬೆಂಗಳೂರುರಾಜ್ಯಸುದ್ದಿ

2 ದಿನ ಪೊಲೀಸ್‌ ಕಸ್ಟಡಿಗೆ ಪ್ರಜ್ವಲ್‌ ರೇವಣ್ಣ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಇಂದು ಪ್ರಜ್ವಲ್‌ನನ್ನು 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆಯಲು ಪೊಲೀಸರು ಕೋರ್ಟ್‌ನಲ್ಲಿ ಮನವಿ ಮಾಡಿದರು. ಈ ಪ್ರಕರಣದಲ್ಲಿ ಪ್ರತಾಪ್ ಎ1 ಆರೋಪಿ ಹಾಗೂ ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದು, ತನಿಖೆಗೆ ಅಗತ್ಯವಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ...
1 2 3 364
Page 1 of 364