ರಜೌರಿಯಲ್ಲಿ ಹಠಾತ್ ಪ್ರವಾಹ : ನೂರಾರು ಕುಟುಂಬಗಳ ಸ್ಥಳಾಂತರ, ನೀರಿನಲ್ಲಿ ಕೊಚ್ಚಿಹೋದ ವಾಹನಗಳು -ಕಹಳೆ ನ್ಯೂಸ್
ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ಜಿಲ್ಲೆ ರಜೌರಿಯಲ್ಲಿ ಶನಿವಾರದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ಇಡೀ ಪಟ್ಟಣವೇ ಜಲಾವೃತಗೊಂಡಿದೆ. ತಗ್ಗು ಪ್ರದೇಶಗಳಿಗೆ ಪ್ರವಾಹದ ನೀರು ಏಕಾಏಕಿ ನುಗ್ಗಿದ ಪರಿಣಾಮ ನೂರಾರು ಕುಟುಂಬಗಳು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶನಿವಾರ ಸಂಜೆ ಆರಂಭವಾದ ಮಳೆ ರಾತ್ರಿಯಿಡೀ ನಿರಂತರವಾಗಿ ಸುರಿದ ಪರಿಣಾಮ...







