Recent Posts

Friday, September 11, 2026

ದೆಹಲಿ

ದೆಹಲಿರಾಜ್ಯಸುದ್ದಿ

ದೆಹಲಿ ಬಿಲ್ಡಿಂಗ್ ಕುಸಿತ ಕೇಸ್ – ಪಿಜಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ, ಗುತ್ತಿಗೆದಾರ ಅರೆಸ್ಟ್ – ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಐದು ಅಂತಸ್ತಿನ ಕಟ್ಟಡವೊಂದು ಕುಸಿದು 7 ಮಂದಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಪಿಜಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ ಹಾಗೂ ಗುತ್ತಿಗೆದಾರರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಸುಧಾಂಶು ಎಂದು ಗುರುತಿಸಲಾಗಿದ್ದು, ಪಿಜಿ ನಿರ್ವಹಣೆ ಮಾಡುತ್ತಿದ್ದ. ಜೊತೆಗೆ ಕಾರ್ಮಿಕ ಗುತ್ತಿಗೆದಾರನಾಗಿದ್ದ ಸನೋಜ್ ಎಂಬಾತನನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈವರೆಗೆ ಒಟ್ಟು ಐವರನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ ಬಂಧಿಸಲ್ಪಟ್ಟಿದ್ದ ಪಿಜಿ ಮಾಲೀಕ ಹರಿರಾಮ್ ಬನ್ಸಲ್ ಅವರ...
ದೆಹಲಿರಾಜ್ಯಸುದ್ದಿ

ನಮ್ಮ ಬದುಕಿನಲ್ಲಿ ದೇಶದ ಪಾತ್ರ ಮರೆಯದಿರಿ: ಪೇಜಾವರ ಶ್ರೀ – ಕಹಳೆ ನ್ಯೂಸ್

ನವದೆಹಲಿ: ನಮ್ಮ ಬದುಕು ರೂಪುಗೊಳ್ಳುವಲ್ಲಿ ದೇಶ ಮತ್ತು ಸಮಾಜದ ಪಾತ್ರ ಮಹತ್ವದ್ದಾಗಿದ್ದು, ಯುವಜನತೆ ಇದನ್ನು ಎಂದಿಗೂ ಮರೆಯಬಾರದು ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು  ಹೇಳಿದರು. ನವದೆಹಲಿಯ ದೀನದಯಾಳು ಉಪಾಧ್ಯಾಯ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಪನಿಷತ್ತುಗಳು ‘ಮಾತೃದೇವೋ ಭವ, ಪಿತೃದೇವೋ ಭವ, ಆಚಾರ್ಯದೇವೋ ಭವ, ಅತಿಥಿದೇವೋ ಭವ’ ಎಂದು ಸಾರಿವೆ. ತಮ್ಮ ಗುರುಗಳಾದ ಶ್ರೀ ವಿಶ್ವೇಶತೀರ್ಥರು ಇದಕ್ಕೆ ‘ರಾಷ್ಟ್ರದೇವೋ ಭವ’ ಎಂಬ ಸಂದೇಶವನ್ನೂ ಸೇರಿಸಿದ್ದರು...
ದೆಹಲಿರಾಜ್ಯಸುದ್ದಿ

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ : ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ – ಕಹಳೆ ನ್ಯೂಸ್

ನವದೆಹಲಿ: ನೈಋತ್ಯ ದೆಹಲಿಯ (Delhi) ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದಿಂದ ಈವರೆಗೆ ಆರು ಜನರನ್ನು ರಕ್ಷಿಸಲಾಗಿದೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ಹುಡುಕಾಟ ನಡೆಯುತ್ತಿದೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ, ಅಂಬುಲೆನ್ಸ್ ಮತ್ತು ಇತರ ತುರ್ತು ಸೇವೆಗಳನ್ನು ಸ್ಥಳದಲ್ಲಿ ಕಲ್ಪಿಸಲಾಗಿದೆ. 75 ಹಾಸಿಗೆಗಳ ಪೇಯಿಂಗ್ ಗೆಸ್ಟ್ ವಸತಿ ಸೌಕರ್ಯವಾಗಿದ್ದ ಕಟ್ಟಡ ಮಧ್ಯಾಹ್ನ 1:30 ರ ಸುಮಾರಿಗೆ...
ದೆಹಲಿರಾಜ್ಯಸುದ್ದಿ

ಜೆಎನ್‌ಯು ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ – 10 ವಿದ್ಯಾರ್ಥಿಗಳಿಂದ ದೂರು -ಕಹಳೆ ನ್ಯೂಸ್

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಪ್ರಾಧ್ಯಾಪಕರ ಮೇಲೆ ಕನಿಷ್ಟ 10 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ವಿಶ್ವವಿದ್ಯಾಲಯದ ಆಂತರಿಕ ದೂರು ಸಮಿತಿಗೆ (ICC) ವಿದ್ಯಾರ್ಥಿಗಳಿಂದ ದೂರು ಸಲ್ಲಿಕೆಯಾಗಿದೆ. ವಿದ್ಯಾರ್ಥಿಗಳು ನೀಡಿದ ದೂರಿನಲ್ಲಿ, ಪ್ರೊಫೆಸರ್‌ ಮೀಟಿಂಗ್‌ ನೆಪದಲ್ಲಿ ತನ್ನ ಮನೆಗೆ ಕರೆಸಿಕೊಂಡು ಅನುಚಿತವಾಗಿ ವರ್ತಸಿದ್ದಾರೆ. ತರಗತಿ ವೇಳೆ ವಿದ್ಯಾರ್ಥಿನಿಯರಿಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನ ಸಹ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಐಸಿಸಿ ಒಂದು ತಿಂಗಳ ಹಿಂದೆ ದೂರು ಸ್ವೀಕರಿಸಿದ್ದು, ಅಂದಿನಿಂದ ಆರೋಪಗಳ ಕುರಿತು...
ದೆಹಲಿರಾಜ್ಯಸುದ್ದಿ

ಬಾಲಾಕೋಟ್ ದಾಳಿ ಹೀರೋ ಅಭಿನಂದನ್ ವರ್ಧಮಾನ್ ಈಗ FLY91 ಪೈಲಟ್ – ಕಹಳೆ ನ್ಯೂಸ್

ನವದೆಹಲಿ: ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆ ವೇಳೆ ಮಿಗ್-21 ಸಮೇತರಾಗಿ ಶತ್ರು ರಾಷ್ಟ್ರದ ಗಡಿಯೊಳಗೆ ನುಗ್ಗಿ ಪಾಕಿಸ್ತಾನ ವಾಯುಪಡೆಯ ವಿಮಾನ ಹೊಡೆದುರುಳಿಸಿದ್ದ ಭಾರತೀಯ ವಾಯುಪಡೆಯ ಮಾಜಿ ಗ್ರೂಪ್ ಕ್ಯಾಪ್ಟನ್ ಹಾಗೂ ವಿರಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್ಇ ದೀಗ ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆ FLY91ಗೆ ಪೈಲಟ್ ಆಗಿ ಸೇರ್ಪಡೆಗೊಂಡಿದ್ದಾರೆ. ಸದ್ಯ ಅವರು ಗೋವಾ ಮತ್ತು ಹೈದರಾಬಾದ್ ಮಾರ್ಗದಲ್ಲಿ ಎಟಿಆರ್ ವಿಮಾನ ಸಂಚರಿಸುವ ಕುರಿತು ತರಬೇತಿಯಲ್ಲಿ ನಿರತರಾಗಿದ್ದು, ತರಬೇತಿ ಪೂರ್ಣಗೊಂಡ ಬಳಿಕ...
ದೆಹಲಿರಾಜ್ಯಸುದ್ದಿ

ಗ್ಯಾಂಗ್‌ರೇಪ್ ಬೆನ್ನಲ್ಲೇ ದೆಹಲಿಯಲ್ಲಿ ಬಸ್‌ಗಳಿಗೆ ಹೊಸ ರೂಲ್ಸ್ – ಪ್ಯಾನಿಕ್ ಬಟನ್ ಕಡ್ಡಾಯ, ಕಿಟಕಿಗಳಿಗೆ ಪರದೆ ಹಾಕಂಗಿಲ್ಲ – ಕಹಳೆ ನ್ಯೂಸ್

ನವದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ದೆಹಲಿ ಸರ್ಕಾರ ಬಸ್‌ಗಳ ಸುರಕ್ಷತಾ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ದೆಹಲಿಯಲ್ಲಿ ಸಂಚರಿಸುವ ಎಲ್ಲಾ ಬಸ್‌ಗಳಲ್ಲಿ ಪ್ಯಾನಿಕ್ ಬಟನ್  ಮತ್ತು ವಾಹನ ಟ್ರ‍್ಯಾಕಿಂಗ್ ಸಾಧನಗಳು ಸದಾ ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿರಬೇಕು ಎಂದು ಸಾರಿಗೆ ಇಲಾಖೆ ಹೊಸ ನಿರ್ದೇಶನ ಹೊರಡಿಸಿದೆ. ಬಸ್‌ಗಳ ಕಿಟಕಿಗಳಿಗೆ ಪರದೆ (ಹಾಕುವುದನ್ನು ನಿಷೇಧಿಸಲಾಗಿದೆ. ಬಸ್‌ಗಳ ಒಳಗೆ ಹಾಗೂ ಹೊರಗಿನ ದೃಶ್ಯ ಸ್ಪಷ್ಟವಾಗಿ ಕಾಣುವಂತೆ ನಿಯಮಾನುಸಾರ...
ದೆಹಲಿರಾಜ್ಯಸುದ್ದಿ

ಕೌಶಂಬಿಯ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ : 11 ಕಾರ್ಮಿಕರು ಸಾವು, ಹಲವರು ಗಂಭೀರ – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ  ಕೌಶಂಬಿ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ 11 ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಕೌಶಂಬಿ ಜಿಲ್ಲಾಧಾಕಾರಿ ಅಮಿತ್ ಕುಮಾರ್ ಪಾಲ್ ಅವರು ಮಾಹಿತಿ ನೀಡಿದ್ದಾರೆ. ಸ್ಫೋಟದ (Blast) ತೀವ್ರತೆಗೆ ಇಡೀ ಕಾರ್ಖಾನೆ ಸಂಪೂರ್ಣವಾಗಿ ನೆಲಸಮವಾಗಿದೆ. ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ಸದ್ಯ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ಅವಶೇಷಗಳಡಿಯಿಂದ...
ದೆಹಲಿರಾಜ್ಯಸುದ್ದಿ

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ – ಡ್ರೈವರ್, ಕಂಡಕ್ಟರ್ ಬಂಧನ – ಕಹಳೆ ನ್ಯೂಸ್

ನವದೆಹಲಿ: ಉತ್ತರ ಪ್ರದೇಶದ  16 ವರ್ಷದ ಬಾಲಕಿಯ ಮೇಲೆ ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ  ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಸ್ ಚಾಲಕ ಹಾಗೂ ಕಂಡಕ್ಟರ್‌ರನ್ನು  ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಾಲಕಿಯನ್ನು ಸುಮಾರು 47 ಕಿಲೋಮೀಟರ್ ದೂರ ಕರೆದೊಯ್ದು ಬಳಿಕ ಕಾಶ್ಮೀರಿ ಗೇಟ್ ಬಸ್ ಟರ್ಮಿನಲ್ ಸಮೀಪದ ರಿಂಗ್ ರೋಡ್ ಬಳಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಆಗಸ್ಟ್ 4ರ ರಾತ್ರಿ ಕಾಶ್ಮೀರಿ ಗೇಟ್...
1 2 3 62
Page 1 of 62