ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧ ವಿವಾದ; ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ -ಕಹಳೆ ನ್ಯೂಸ್
ನವದೆಹಲಿ: ಬಕ್ರೀದ್ ಸೇರಿದಂತೆ ಯಾವುದೇ ದಿನ ತಮಿಳುನಾಡಿನಾದ್ಯಂತ ಹಸು ಮತ್ತು ಕರುಗಳ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯಕ್ಕೆ ತಾತ್ಕಾಲಿಕ ಪರಿಹಾರ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ, ಹೈಕೋರ್ಟ್ ಆದೇಶದ ಕೊನೆಯ ಭಾಗಕ್ಕೆ ತಿದ್ದುಪಡಿ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಜೊತೆಗೆ ರಾಜ್ಯ...







