Sunday, June 14, 2026

ದೆಹಲಿ

ದೆಹಲಿರಾಜ್ಯಸುದ್ದಿ

ದೇಶದ 18 ನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ : ಕೇಂದ್ರ ಸರ್ಕಾರ ಮಹತ್ವದ ಯೋಜನೆ -ಕಹಳೆ ನ್ಯೂಸ್

ನವದೆಹಲಿ: ಕೊಚ್ಚಿಯಲ್ಲಿ ವಾಟರ್‌ ಮೆಟ್ರೋ ಯಶಸ್ಸು ಕಂಡ ಬೆನ್ನಲ್ಲೇ ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ ವ್ಯವಸ್ಥೆ ಪರಿಚಯಿಸಲು ಕೇಂದ್ರ ಸರ್ಕಾರಯೋಜನೆ ರೂಪಿಸಿದೆ. ದೇಶದ 18 ಪ್ರಮುಖ ನಗರಗಳಲ್ಲಿ ವಾಟರ್‌ ಮೆಟ್ರೋ ಸಾರಿಗೆ ಪರಿಚಯಿಸಲು ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ  ತಯಾರಿ ನಡೆಸಿದೆ. ಅಲ್ಲದೇ ಸಚಿವಾಲಯ ಈಗಾಗಲೇ ಕರಡು ರಾಷ್ಟ್ರೀಯ ಜಲ ಮೆಟ್ರೋ ನೀತಿಯನ್ನೂ ಸಿದ್ಧಪಡಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೊದಲ ಹಂತದಲ್ಲಿ ಉತ್ತರ ಪ್ರದೇಶದ...
ದೆಹಲಿರಾಜ್ಯಸುದ್ದಿ

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ LPG ಟ್ಯಾಂಕರ್‌ – ಕಹಳೆ ನ್ಯೂಸ್

ನವದೆಹಲಿ: ಮಧ್ಯಪ್ರಾಚ್ಯ ಯುದ್ಧ ಭೀತಿ ಮತ್ತು ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಭಾರತದತ್ತ ಎಲ್‌ಪಿಜಿ (LPG) ಮತ್ತು ಕಚ್ಚಾ ತೈಲ ಪೂರೈಕೆ ಮುಂದುವರಿದಿದೆ. ಮಾರ್ಷಲ್ ದ್ವೀಪಗಳ ಧ್ವಜ ಹೊತ್ತ ಸಿಮಿ  ಎಲ್‌ಪಿಜಿ ಟ್ಯಾಂಕರ್ ಸುರಕ್ಷಿತವಾಗಿ ಗುಜರಾತ್‌ನ ಕಾಂಡ್ಲಾದ ದೀನ್‌ದಯಾಳ್ ಬಂದರನ್ನು ತಲುಪಿದೆ. ಇದು ಭಾರತದ ಇಂಧನ ಪೂರೈಕೆಗೆ ಮಹತ್ವದ ಬೆಳವಣಿಗೆಯಾಗಿದೆ. ಸುಮಾರು 20,000 ಟನ್ ದ್ರವ ಪ್ರೊಪೇನ್ ಮತ್ತು ಬ್ಯುಟೇನ್ ಸಾಗಿಸುತ್ತಿದ್ದ ಈ ಟ್ಯಾಂಕರ್ ಮೇ 13 ರಂದು ಹಾರ್ಮುಜ್...
ದೆಹಲಿರಾಜ್ಯಸುದ್ದಿ

 182 ಕೋಟಿ ಮೌಲ್ಯದ ʻಜಿಹಾದಿ ಡ್ರಗ್‌ʼ ಜಪ್ತಿ : ಅಮಿತ್‌ ಶಾ -ಕಹಳೆ ನ್ಯೂಸ್

ನವದೆಹಲಿ: ʻಆಪರೇಷನ್ ರೇಜ್‌ಪಿಲ್ʼ  ವಿಶೇಷ ಕಾರ್ಯಾಚರಣೆಯಲ್ಲಿ ಮಾದಕ ದ್ರವ್ಯ ನಿಯಂತ್ರಣ ಘಟಕವು ಸುಮಾರು 182 ಕೋಟಿ ರೂ. ಮೌಲ್ಯದ ʻಜಿಹಾದಿ ಡ್ರಗ್‌ʼ ಅನ್ನು ವಶಪಡಿಸಿಕೊಂಡಿದೆ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ  ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ (PM Modi) ನೇತೃತ್ವದ ಸರ್ಕಾರ ʻಡ್ರಗ್‌ ಮುಕ್ತ ಭಾರತʼ ನಿರ್ಮಾಣ ಮಾಡಲು ಸಂಕಲ್ಪ ಮಾಡಿದೆ ಎಂದು ಹೇಳಿದ್ದಾರೆ. ಆಪರೇಷನ್‌ ರೇಜ್‌ಪಿಲ್‌ ಮೂಲಕ...
ದೆಹಲಿರಾಜ್ಯಸುದ್ದಿ

ಭಾರತದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ರೆ ಭೂಪಟದಲ್ಲಿ ಇಲ್ಲದಂತೆ ಮಾಡ್ತೀವಿ: ಪಾಕ್‌ಗೆ ಖಡಕ್‌ ವಾರ್ನಿಂಗ್‌ – ಕಹಳೆ ನ್ಯೂಸ್

ನವದೆಹಲಿ: ಭಯೋತ್ಪಾದಕರಿಗೆ ಆಶ್ರಯ ನೀಡುವುದು, ಭಾರತದ ವಿರುದ್ಧ ಕಾರ್ಯಾಚರಣೆ ನಡೆಸುವುದನ್ನು ಮುಂದುವರಿಸಿದರೆ, ಭೂಪಟದಲ್ಲಿ ಪಾಕಿಸ್ತಾನ ಇರಬೇಕೆ ಅಥವಾ ಬೇಡವೇ ಅನ್ನೋದನ್ನು ನಾವು ನಿರ್ಧರಿಸುತ್ತೇವೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್‌ ಉಪೇಂದ್ರ ದ್ವಿವೇದಿ ಎಚ್ಚರಿಸಿದ್ದಾರೆ. ದೆಹಲಿಯ ಮಾಣೆಕ್ಷಾ ಕೇಂದ್ರದಲ್ಲಿ ‘ಯೂನಿಫಾರ್ಮ್ ಅನ್‌ವೀಲ್ಡ್’ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಆಪರೇಷನ್ ಸಿಂಧೂರ್‌ಗೆ ಕಾರಣವಾದ ಸಂದರ್ಭಗಳು ಮತ್ತೆ ಬಂದರೆ ಭಾರತೀಯ ಸೇನೆಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ಪಾಕಿಸ್ತಾನಕ್ಕೆ ತಿಳಿದಿದೆ ಎಂದು...
ದೆಹಲಿರಾಜ್ಯಸುದ್ದಿ

ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ಪರೀಕ್ಷೆ : ಧರ್ಮೇಂದ್ರ ಪ್ರಧಾನ್ -ಕಹಳೆ ನ್ಯೂಸ್

ನವದೆಹಲಿ: ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್  ಪರೀಕ್ಷೆ ನಡೆಸಲಾಗುವುದು. ಪ್ರಶ್ನೆ ಪರೀಕ್ಷೆಯ ಸೋರಿಕೆಯ ಜವಾಬ್ದಾರಿಯನ್ನು ತೆಗೆದುಕೊಂಡು ಪರೀಕ್ಷಾ ಮಾಫಿಯಾ ವಿರುದ್ಧ ಹೋರಾಡುತ್ತೇವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್  ಹೇಳಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದರ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ. ಸಚಿವಾಲಯ ಇದನ್ನು ಸರಿಪಡಿಸಲಿದೆ. ಮೇ 3ರಂದು ನಡೆಸಲಾಗಿದ್ದ ನೀಟ್ ಪರೀಕ್ಷೆಯನ್ನು ಈಗಾಗಲೇ ರದ್ದುಗೊಳಿಸಲಾಗಿದ್ದು, ಜೂನ್ 21ಕ್ಕೆ...
ದೆಹಲಿರಾಜ್ಯಸುದ್ದಿ

ಪೆಟ್ರೋಲ್‌ ದರ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರವೂ ಏರಿಕೆ -ಕಹಳೆ ನ್ಯೂಸ್

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾದ ಬೆನ್ನಲ್ಲೇ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್(CNG) ಬೆಲೆ ಏರಿಕೆಯಾಗಿದೆ. ಪ್ರತಿ ಕೆಜಿ ಸಿಎನ್‌ಜಿ ದರವನ್ನು 2 ರೂ. ಏರಿಸಲಾಗಿದೆ. ಪರಿಷ್ಕೃತ ದರ ಇಂದು ಬೆಳಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ  1 ಕೆಜಿ ಸಿಎನ್‌ಜಿ ದರ 93 ರೂ.ಗೆ ಏರಿಕೆಯಾಗಿದೆ. ವಿವಿಧ ಭಾಗಗಳಲ್ಲಿ ಅಥವಾ ವಿತರಕರ (ಗ್ಯಾಸ್ ಕಂಪನಿಗಳು) ಆಧಾರದ ಮೇಲೆ ಬೆಲೆಯಲ್ಲಿ 30 ಪೈಸೆಯಿಂದ 1 ರೂ. ರವರೆಗೆ ವ್ಯತ್ಯಾಸ ಇರಲಿದೆ. ಆಟೋರಿಕ್ಷಾಗಳು, ಕ್ಯಾಬ್‌ಗಳು...
ದೆಹಲಿರಾಜ್ಯಸುದ್ದಿ

ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ 3 ರೂ. ಏರಿಕೆ -ಕಹಳೆ ನ್ಯೂಸ್

ನವದೆಹಲಿ: ನಿರೀಕ್ಷೆಯಂತೆ ದೇಶಾದ್ಯಂತ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಯಲ್ಲಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿದೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ದರ 106.17 ರೂ. ಏರಿಕೆಯಾದರೆ ಡಿಸೇಲ್‌ ದರ 94.10 ರೂ. ತಲುಪಿದೆ. ಬೆಲೆ ಏರಿಕೆಗೆ ಕಾರಣ ಏನು? ಅಂತರರಾಷ್ಟ್ರೀಯ ಮಟ್ಟದಲ್ಲಿ...
ದೆಹಲಿರಾಜ್ಯಸುದ್ದಿ

ಜೂನ್‌ 21ಕ್ಕೆ ನೀಟ್‌ ಯುಜಿ ಮರು ಪರೀಕ್ಷೆ -ಕಹಳೆ ನ್ಯೂಸ್

ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ (NEET-UG 2026) ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (NTA) ಅಧಿಕೃತವಾಗಿ ತಿಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ನೀಟ್‌ ಪರೀಕ್ಷೆಯನ್ನು ರದ್ದುಗೊಳಿಸಿದ್ದರಿಂದ ಈಗ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಕೇಂದ್ರೀಯ ತನಿಖಾ ದಳ ಈಗ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿದೆ. ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು NTA ಅಧಿಕೃತ...
1 2 3 4 5 6 57
Page 4 of 57