ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ – ಕಹಳೆ ನ್ಯೂಸ್
ಬೆಂಗಳೂರು: ಬೆಂಗಳೂರು ತುಳುವೆರೆ ಚಾವಡಿಯ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಜುಲೈ 26ರಂದು ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ನಡೆಯಲಿದೆ. ಭಾನುವಾರ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿರುವ ಈ ಕಾರ್ಯಕ್ರಮವನ್ನು ಪರಮ ಪೂಜ್ಯ ಶ್ರೀ ಡಾ.ವಿದ್ಯಾವಾಚಸ್ಪತಿ ವಿಶ್ವ ಸಂತೋಷ ಭಾರತಿ ಶ್ರೀಪಾದರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಆರೋಗ್ಯ ಸಚಿವ ಯು.ಟಿ.ಖಾದರ್, ಶಾಸಕರಾದ ಅಶೋಕ್ ರೈ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರನಾಥ್ ಗಟ್ಟಿ, ಉದ್ಯಮಿ ಹಾಗೂ...






