ಕಾಂಗ್ರೆಸ್ 5 ಗ್ಯಾರಂಟಿಗಳು ಮೊದಲ ಸಂಪುಟ ಸಭೆಯಲ್ಲಿಯೇ ಜಾರಿ –ಕಹಳೆ ನ್ಯೂಸ್
ಇಂದಿನಿAದಲೇ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಿಎಂ ಸಿದ್ದರಾಮಯ್ಯ 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಮೊದಲ ಸಂಪುಟ ಸಭೆ ನಡೆದಿದೆ. ಮೊದಲ ಸಂಪುಟ ಸಭೆ ಬಳಿಕ ಮಾತಾಡಿದ ಸಿಎಂ ಸಿದ್ದರಾಮಯ್ಯ, ನನಗೆ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಗೆ ಧನ್ಯವಾದಗಳು. ಮೊದಲ ಸಂಪುಟ ಸಭೆಯಲ್ಲೇ ನಾವು ಚುನಾವಣೆಗೆ ಮುನ್ನ ರಾಜ್ಯದ ಜನತೆಗೆ ನೀಡಿದ್ದ 5...







