Tuesday, March 17, 2026

ಬೆಂಗಳೂರು

ಬೆಂಗಳೂರು

ಸಿ.ಟಿ.ರವಿ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕಿಡ್ನಿ ಸಂಬಂಧಿ ಸಮಸ್ಯೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವ ಸಿ.ಟಿ.ರವಿ ಅವರ ಆರೋಗ್ಯ ಮೇ 10ರ ನಿನ್ನೆ ಮಧ್ಯರಾತ್ರಿ ಏರುಪೇರಾದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವ ಅವರು, ಈ ಮುನ್ನವೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು....
ಬೆಂಗಳೂರುರಾಜಕೀಯಸುದ್ದಿ

ಕುಟುಂಬದೊ0ದಿಗೆ ಮತದಾನ ಮಾಡಿದ ಬಿಎಸ್ ಯಡಿಯೂರಪ್ಪ –ಕಹಳೆ ನ್ಯೂಸ್

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನ ನಡೆಯುತ್ತಿದೆ. ಜನರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತದಾನ ಮಾಡಿದರು. ಕ್ಷೇತ್ರದ ಶಾಸಕರೂ ಆಗಿರುವ ಅವರು, ತಾಲೂಕಿನ ಮತಗಟ್ಟೆ ಸಂಖ್ಯೆ 134ರಲ್ಲಿ ತಮ್ಮ ಹಕ್ಕು ಚಲಾವಣೆ ಮಾಡಿದರು. ಮತಗಟ್ಟೆಗೆ ಆಗಮಿಸುವುದಕ್ಕೂ ಮೊದಲು ಕುಟುಂಬದೊAದಿಗೆ ದೇವಾಲಯಕ್ಕೆ ತೆರಳಿದ ಬಿ. ಎಸ್. ಯಡಿಯೂರಪ್ಪ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮತದಾನಕ್ಕೆ ಮತದಾರರನ್ನು ವಾಹನದಲ್ಲಿ ಕರೆ ತರುವುದು ಅಪರಾಧ – ಕಹಳೆ ನ್ಯೂಸ್

ಕರ್ನಾಟಕ, ಮೇ9 ; ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮೇ 10 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಚುನಾವಣಾ ಆಯೋಗ ಮತದಾನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲಾ ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಲಾಗಿದೆ. ಚುನಾವಣಾನಿಯಮದ ಪ್ರಕಾರ ಯಾವುದೇ ಪಕ್ಷದವರು ಹಾಗೂ ಅಭ್ಯರ್ಥಿಗಳು ಮತದಾರರನ್ನು ಕ್ಷೇತ್ರದ ಹೊರಗಿನಿಂದ ಅಥವಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ಮಾಡಲು ವಾಹನಗಳಲ್ಲಿ ಕರೆದುಕೊಂಡು ಬರುವಂತಿಲ್ಲ ಎಂದು...
ಬೆಂಗಳೂರುರಾಜ್ಯಸುದ್ದಿ

ಮೇ 10ರ ಮತದಾನದಂದು ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ ; ಮತ ಹಾಕಿದವರಿಗೆ ಮಾತ್ರ ವಾಹನದಲ್ಲಿ ಪರ್ಮಿಷನ್ – ಕಹಳೆ ನ್ಯೂಸ್

ಮತದಾರರು ತಪ್ಪದೇ ಮತ ಚಲಾಯಿಸುವ ಉದ್ದೇಶದಿಂದ ಸರ್ಕಾರ ರಜಾ ಘೋಷಣೆ ಮಾಡಿದೆ. ಆದ್ರೆ ಕೆಲ ಮತದಾರರು ಮತ ಚಲಾಯಿಸದೆ ತಮಗೆ ಸಿಕ್ಕ ರಜೆಯನ್ನು ಮಜಾ ಮಾಡುವ ಉದ್ದೇಶದಿಂದ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಹೀಗಾಗಿ ಕೆಲ ಪ್ರಮುಖ ಪ್ರವಾಸಿ ತಾಣಗಳಿಗೆ ಮತದಾನದ ದಿನದಂದು ನಿರ್ಬಂಧ ಹೇರಲಾಗಿದೆ. ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಶುರುವಾಗಿದೆ(Karnataka Assembly Elections 2023). ಮೇ 10ರಂದು ನಡೆಯುವ ಚುನಾವಣೆಗೆ ಮತದಾರರು ತಪ್ಪದೇ ಮತ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಖರ್ಗೆಗೆ ದೂರು ಎಂಬ ಪತ್ರ ವೈರಲ್ – ಕಹಳೆ ನ್ಯೂಸ್

ಬೆಂಗಳೂರು: ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರು ನೀಡಲಾಗಿದೆ ಎನ್ನಲಾದ ಪತ್ರವೊಂದು ಹರಿದಾಡುತ್ತಿದ್ದು, ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಇದು ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ. ''ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ...
ಬೆಂಗಳೂರುಮೈಸೂರುರಾಜ್ಯಸಂತಾಪಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ – ಕಹಳೆ ನ್ಯೂಸ್

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ(Mysuru Dasara) ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ(67) ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ಬಲರಾಮ ಅನೆ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗುವ ಮೂಲಕ ಬಲರಾಮ ಎಲ್ಲರ ಕಣ್ಮಣಿಯಾಗಿತ್ತು. ಅತ್ಯಂತ ಸೌಮ್ಯ ಸ್ವಭಾವದ ಆನೆ ಬಲರಾಮ ಇತ್ತೀಚೆಗೆ ತೀವ್ರ ಅಸ್ವಸ್ಥಗೊಂಡಿತ್ತು ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಬಜರಂಗದಳ ಬ್ಯಾನ್ ಸರಿಯಲ್ಲ ; ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ನಟಿ ರಮ್ಯಾ – ಕಹಳೆ ನ್ಯೂಸ್

ರಾಜ್ಯದಲ್ಲಿ ಬಜರಂಗದಳ (Bajrang Dal) ಬ್ಯಾನ್ ಮಾಡುವ ವಿಚಾರ ರಾಜಕೀಯ ಪಡಸಾಲೆಯಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ಕಾಂಗ್ರೆಸ್ (Congress) ಪಕ್ಷ ಬಿಡುಗಡೆ ಮಾಡಿರುವ ತನ್ನ ಪ್ರಣಾಳಿಕೆಯಲ್ಲಿ ‘ಬಜರಂಗದಳವನ್ನು ನಿಷೇಧ ಮಾಡಲಾಗುವುದು’ ಎಂದಿದೆ. ಇದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕೋಪಕ್ಕೆ ತುತ್ತಾಗಿದೆ. ಅದರಲ್ಲೂ ಬಿಜೆಪಿಯು ಇದನ್ನು ಚುನಾವಣಾ ಅಸ್ತ್ರವಾಗಿ ಕಾಂಗ್ರೆಸ್ ಮೇಲೆ ಪ್ರಯೋಗಿಸುತ್ತಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ರಮ್ಯಾ ವಿಭಿನ್ನವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಬಜರಂಗದಳವನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಜರಂಗದಳ ನಿಷೇಧ – ಕಾಂಗ್ರೆಸ್‌ಗೆ ಠಕ್ಕರ್ ; ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ – ಕಹಳೆ ನ್ಯೂಸ್

ಬೆಂಗಳೂರು: ಚುನಾವಣೆಗೆ ಬೆರಳೆಣಿಕೆಯಷ್ಟು ದಿನಗಳು ಉಳಿದುಕೊಂಡಿರುವ ಸಮಯದಲ್ಲಿ ಕಾಂಗ್ರೆಸ್ (Congress) ಬಜರಂಗದಳವನ್ನು (Bajrang Dal) ನಿಷೇಧಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಹಾಕಿ ವಿವಾದವನ್ನು ಎಳೆದುಕೊಂಡಿದೆ. ಇದೀಗ ಬಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಕಾಂಗ್ರೆಸ್‌ಗೆ ಠಕ್ಕರ್ ಕೊಡಲು ಮುಂದಾಗಿದೆ. ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ (Temple) ಹನುಮಾನ್ ಚಾಲೀಸಾ (Hanuman Chalisa) ಪಠಿಸಲು ಬಜರಂಗದಳ ನಿರ್ಧರಿಸಿದೆ. ಸಂಜೆ 7 ಗಂಟೆಗೆ ಹನುಮಾನ್ ಚಾಲೀಸಾ ಪಠಣ ಆಯೋಜನೆಗೆ ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್...
1 146 147 148 149 150 212
Page 148 of 212