ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭ: ಮಾಧ್ಯಮಗಳಿಗೆ ಮೋದಿ ಮಾಹಿತಿ – ಕಹಳೆ ನ್ಯೂಸ್
ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು (ಸೋಮವಾರ) ಆರಂಭವಾಗಲಿದೆ. ಈ ಅಧಿವೇಶನಕ್ಕೆ ಆಡಳಿತ ಮತ್ತು ವಿರೋಧ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ತಯಾರಿ ನಡೆಸಿದ್ದು, ವಿಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆಯನ್ನು ತಮ್ಮ ಪ್ರಮುಖ ಅಸ್ತ್ರವಾಗಿಸಿಕೊಂಡಿದ್ದರೆ, ಆಡಳಿತ ಪಕ್ಷವು ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಬಳಸಲಿದೆ ಎಂದು ನೀರಿಕ್ಷಿಸಲಾಗಿದೆ. ಡಿಸೆಂಬರ್ 1 ರಂದು (ಸೋಮವಾರ) ಬೆಳಿಗ್ಗೆ 10:00 ಗಂಟೆಗೆ ಹದಿನೆಂಟನೇ ಲೋಕಸಭೆಯ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು...







