ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಆಗಬಾರದು ಎಂದರೆ ಜನತೆ ಕಟ್ಟುನಿಟ್ಟಾಗಿ ಕೊರೋನಾ ನಿಯಮ ಪಾಲನೆ ಮಾಡಬೇಕು, ಇಲ್ಲದಿದ್ದಲ್ಲಿ ಕಠಿಣ ಕ್ರಮ ಅನಿವಾರ್ಯವೆಂದು ಎಂದ ಸಿಎಂ-ಕಹಳೆ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನ ಬಗ್ಗೆ ತಜ್ಞರ ಸಮಿತಿ ಇದು ಎರಡನೇ ಅಲೆ ಮುನ್ಸೂಚನೆ ಎಂದು ತಿಳಿಸಿದ್ದು, ಪರಿಸ್ಥಿತಿ ಎದುರಿಸಲು ಕೆಲ ಸಲಹೆ ನೀಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜಾರಿಗೆ ತಂದು ಒಂದು ವಾರ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ. ಕೊರೋನಾ ಪರಿಸ್ಥಿತಿ ಅವಲೋಕನ ಕುರಿತು ತಜ್ಞರ ಜೊತೆ ಸಮಾಲೋಚನೆ ಮಾಡಲಾಯಿತು. ಎಲ್ಲರ ಅಭಿಪ್ರಾಯದಂತೆ ಕಳೆದ 14 ದಿನಗಳಲ್ಲಿ ಪಾಸಿಟಿವ್ ದರ ಹೆಚ್ಚಾಗಿದ್ದು,...







