ಲಿಫ್ಟ್‌ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಂದಿದ್ದ ಕೆಲಸದಾಕೆ ಅರೆಸ್ಟ್ -ಕಹಳೆ ನ್ಯೂಸ್
ಬೆಂಗಳೂರು: ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಕೊಲೆ ಮಾಡಿದ್ದ ಕೆಲಸದಾಕೆಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪಲತಾ ಬಂಧಿತ ಮನೆಕೆಲಸದಾಕೆ. ಶ್ವಾನದ ಮಾಲೀಕರ ದೂರಿನ ಮೇರೆಗೆ ತನಿಖೆಗಿಳಿದ ಪೊಲೀಸರಿಗೆ ಪುಷ್ಪಲತಾ ನಾಯಿ ಕೊಲೆ ಮಾಡಿದ್ದಾಳೆ ಅನ್ನೋದು ಗೊತ್ತಾಗಿದೆ. ರಾಶಿಕಾ ಎಂಬವರು ತಮ್ಮ ‘ಗೂಸಿ’ ಹೆಸರಿನ ನಾಯಿಯನ್ನು ನೋಡಿಕೊಳ್ಳಲು ಪುಷ್ಪಲತಾಳನ್ನು ಮನೆ ಕೆಲಸದಾಕೆಯಾಗಿ ನೇಮಿಸಿಕೊಂಡಿದ್ದರು. ಇದಕ್ಕಾಗಿ ಪುಷ್ಪಲತಾಳಿಗೆ ಮಾಸಿಕ 23 ಸಾವಿರ ರೂ. ಸಂಬಳವನ್ನೂ ನೀಡುತ್ತಿದ್ದರು. ಪುಷ್ಪಲತಾ ಲಿಫ್ಟ್‌ನಲ್ಲಿ...







