ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್-ಕಹಳೆ ನ್ಯೂಸ್
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು (ಮೇ 29) ಅಂಗೀಕರಿಸಿದ್ದಾರೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಆದಾಗ್ಯೂ ಹೊಸ ಸರ್ಕಾರ ರಚನೆಯಾಗುವವರೆಗೆ ಇನ್ನೂ 2-3 ದಿನಗಳ ಕಾಲ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ. ರಾಜ್ಯಪಾಲರು ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ...







