ಬೆಂಗಳೂರಲ್ಲಿ ಪುಂಡರ ಹಾವಳಿ ಹೆಚ್ಚಳ : ದೌರ್ಜನ್ಯ ಸಹಿಸುವುದಿಲ್ಲ ಎಂದ ಗೃಹ ಸಚಿವ ಪರಮೇಶ್ವರ್ – ಕಹಳೆ ನ್ಯೂಸ್
ಬೆಂಗಳೂರು - ಆನೇಕಲ್‌ನ ಮೈಲಸಂದ್ರದಲ್ಲಿ ಪುಂಡರ ಗುಂಪೊಂದು ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಪ್ರಕರಣವನ್ನು ಗಂಭೀರವಾಗಿ ತೆಗೆದು ಕೊಂಡಿದ್ದು, ಇಂತಹ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿಯೇ ಪೊಲೀಸ್ ಇಲಾಖೆ ಇದೆ. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಸಮಾಜದಲ್ಲಿ ಇಂತಹ ಕೃತ್ಯಗಳನ್ನು ತೀವ್ರವಾಗಿ ಪರಿಗಣಿಸಲಾಗುತ್ತದೆ ಎಂದರು. ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದ ಪ್ರಕರಣದಲ್ಲಿ ಪೊಲೀಸರ ವೈಫಲ್ಯಗಳಿವೆ...







