ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ : ಮೇ 1ರಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಘೋಷಣೆ-ಕಹಳೆ ನ್ಯೂಸ್
ಬೆಂಗಳೂರು: ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ...







