ಅಂದು ಇಂದಿರಾಗಾಂಧಿ ಹೇಳಿದರೆ ‘ಶಿಸ್ತು’, ಇಂದು ಮೋದಿ ಹೇಳಿದರೆ ‘ತಪ್ಪು’ – ಕಾಂಗ್ರೆಸ್ ಟೀಕೆಗೆ ಅಶೋಕ್ ತಿರುಗೇಟು -ಕಹಳೆ ನ್ಯೂಸ್
ಬೆಂಗಳೂರು: ದೇಶದ ಹಿತದೃಷ್ಟಿಯಿಂದ ಚಿನ್ನ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಬಿಜೆಪಿ ನಾಯಕರು ಈಗ ತಿರುಗೇಟು ನೀಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನೆನಪಿನ ಶಕ್ತಿ ನಿಗೂಢವಾಗಿ ಕೆಲಸ ಮಾಡುತ್ತದೆ ಎಂದು ಟೀಕಿಸಿದ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಈ ಹಿಂದೆ ಕಾಂಗ್ರೆಸ್ ಸರ್ಕಾರಗಳೂ ಸಹ ಇದೇ ರೀತಿಯ ನಿಲುವು ತಳೆದಿದ್ದವು...







