ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿದು ದುರಂತ :ಆಟೋ, ಕಾರು ಅಪ್ಪಚ್ಚಿ -ಕಹಳೆ ನ್ಯೂಸ್
ಮುಂಬೈ: ಮುಲುಂಡ್ ಪಶ್ಚಿಮ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ನ ಒಂದು ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ. ಶನಿವಾರ (ಇಂದು) ಮಧ್ಯಾಹ್ನ ಮುಲುಂಡ್ ಪ್ರದೇಶದ ಜಾನ್ಸನ್ & ಜಾನ್ಸನ್ ಕಂಪನಿಯ ಬಳಿ ಘಟನೆ ನಡೆದಿದೆ. ಎಲ್‌ಬಿಎಸ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಂಬದ ಸಿಮೆಂಟ್ ಭಾಗವು ಏಕಾಏಕಿ ಕುಸಿದು ಕೆಳಗೆ ಹಾದುಹೋಗುತ್ತಿದ್ದ ಆಟೋರೀಕ್ಷಾ ಹಾಗೂ ಕಾರಿನ ಮೇಲೆ ಬಿದ್ದಿದೆ....







