ವಿಶ್ವಕಪ್ ಗೆದ್ದ ರಾಜ್ಯದ ಆಟಗಾರ್ತಿಯರಿಗೆ ಬಹುಮಾನ ಘೋಷಿಸಿದ ಮಹಾರಾಷ್ಟ್ರ ಸರ್ಕಾರ – ಕಹಳೆ ನ್ಯೂಸ್
ಮುಂಬೈ: ಮಹಿಳಾ ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಶುಭಾಶಯಗಳನ್ನು ತಿಳಿಸಿರುವ ಮಹಾರಾಷ್ಟ್ರ ಸರ್ಕಾರ, ರಾಜ್ಯದ ಆಟಗಾರ್ತಿಯರಿಗೆ ನಗದು ಬಹುಮಾನ ನೀಡುವುದಾಗಿ ಮಂಗಳವಾರ ತಿಳಿಸಿದೆ. ಮೊದಲ ಬಾರಿ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ತಂಡದಲ್ಲಿದ್ದ ಮಹಾರಾಷ್ಟ್ರ ಮೂಲದ ಆಟಗಾರ್ತಿಯರಾದ ಸ್ಮೃತಿ ಮಂದಾನ, ಜೆಮಿಮಾ ರಾಡ್ರಿಗಸ್ ಹಾಗೂ ರಾಧಾ ಯಾದವ್ ಅವರಿಗೆ ನಗದು ಬಹುಮಾನ ನೀಡಿ, ಗೌರವಿಸಲಿದ್ದೇವೆ ಎಂದು ಮುಖ್ಯಮಂತ್ರಿ ಕಚೇರಿಯು ಹೇಳಿದೆ. ಆದರೆ, ಬಹುಮಾನದ ಮೊತ್ತವನ್ನು ಮುಖ್ಯಮಂತ್ರಿ ಕಚೇರಿಯು ತಿಳಿಸಿಲ್ಲ. ಮುಖ್ಯಮಂತ್ರಿ...







