ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ ಜಮ್ಮು ಸರ್ಕಾರ -ಕಹಳೆ ನ್ಯೂಸ್
ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರದ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ. 'ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತವಾಗಿದ್ದು ಹಾಗೂ ಅತೀವ ದುಃಖಿತನಾಗಿದ್ದೇನೆ. ಅಮಾಯಕ ನಾಗರಿಕರ ವಿರುದ್ಧದ ಇಂತಹ ಹೇಯ ಕೃತ್ಯಗಳಿಗೆ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದಕ ದಾಳಿಯಲ್ಲಿ...







