ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ : ಸಂಧ್ಯಾ ನಾಗರಾಜ್ ವಿರುದ್ಧ ದೂರು-ಕಹಳೆ ನ್ಯೂಸ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಬೆಂಗಳೂರಿನ ಸಂಧ್ಯಾ ನಾಗರಾಜ್ ವಿರುದ್ಧ ದೂರು ನೀಡಲಾಗಿದೆ. ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್ , ಜೈಲಿನಲ್ಲಿ ಅಧಿಕಾರಿಗಳು ಆಕೆಗೆ ಸಹಕಾರ ಕೊಡ್ತಿದ್ದಾರೆ. ಪ್ರತಿದಿನ ಬಾಕ್ಸ್‌ನಲ್ಲಿ ಊಟ ತಂದುಕೊಡ್ತಾರೆ. ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿಂದೆ ಜೈಲಿನಲ್ಲಿ ಇದ್ದ ಸಂಧ್ಯಾ ನಾಗರಾಜ್...





