ಖರ್ಗೆ ಮೊಮ್ಮಗಳನ್ನು ವರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಹವ್ಯಕ ಬ್ರಾಹ್ಮಣ ಯುವಕ ; ದಲಿತ – ಬ್ರಾಹ್ಮಣ ವಿವಾಹಕ್ಕೆ ಸಾಕ್ಷಿಯಾದ ರಾಜಕಾರಣಿಗಳು – ಕಹಳೆ ನ್ಯೂಸ್
ಬೆಂಗಳೂರು, ಅ.26 : ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಲೋಕಸಭೆಯ ಪ್ರತಿಪಕ್ಷದ ನಾಯಕ ಖರ್ಗೆ ಹವ್ಯಕ ಬ್ರಾಹ್ಮಣರ ಮನೆಯ ಬೀಗರಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರ ಪುತ್ರಿ ಜಯಶ್ರೀ ಮತ್ತು ರಾಧಾಕೃಷ್ಣ ದಂಪತಿಯ...







