Friday, March 13, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಲಾಕ್​ಡೌನ್​ ವಿಸ್ತರಣೆ ಕುರಿತು ಸಿಎಂ ಮಟ್ಟದಲ್ಲಿ ಅಧಿಕೃತವಾಗಿ ಚರ್ಚೆ ನಡೆದಿಲ್ಲ’ ; ಗೃಹ ಸಚಿವ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಮೇ.15 : ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಣೆ ಕುರಿತು ಚರ್ಚೆಯಾಗಿಲ್ಲ ಸಿಎಂ ಮಟ್ಟದಲ್ಲಿ ಅಧಿಕೃತವಾಗಿ ಇನ್ನೂ ಈ ಕುರಿತು ಮಾತುಕತೆ ನಡೆದಿಲ್ಲ, ಈಗಿರುವಂತೆ ಮೇ 24ರ ವರೆಗೆ ಲಾಕ್‌ಡೌನ್ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.       ಈ ಕುರಿತು ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಆಹಾರ ಪೂರೈಕೆ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಲ್ಲಿದ್ದರೂ ಸೋಂಕು ಕಡಿಮೆಯಾಗುತ್ತಿಲ್ಲ,...
ಬೆಂಗಳೂರುರಾಜ್ಯಸುದ್ದಿ

ಕೊರೋನಾ ವಿರುದ್ಧದ ಹೋರಾಟಕ್ಕೆ ಇನ್ಫೋಸಿಸ್ ಮತ್ತೆ 100 ಕೋಟಿ ರೂ. ; ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಘೋಷಣೆ – ಕಹಳೆ ನ್ಯೂಸ್

ನವದೆಹಲಿ: ಕಳೆದ ವರ್ಷ ಬೆಂಗಳೂರಿನಲ್ಲಿ ಕೋವಿಡ್ ಆಸ್ಪತ್ರೆಗಾಗಿ 100 ಕೋಟಿ ರೂ. ನೀಡಿದ್ದ ಇನ್ಫೋಸಿಸ್ ಫೌಂಡೇಶನ್ ಕೋವಿಡ್ ವಿರುದ್ಧದ ಹೋರಾಟಕ್ಕೆ ಮತ್ತೆ 100 ಕೋಟಿ ರೂಪಾಯಿ ದೇಣಿಗೆ ನೀಡಲಿದೆ. ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಭಾನುವಾರ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕಳೆದ ವರ್ಷವೂ 100 ಕೋಟಿ ರೂಪಾಯಿ ನೀಡಲಾಗಿತ್ತು. ವೆಂಟಿಲೇಟರ್, ಆಕ್ಸಿಜನ್ ಯಂತ್ರ ಪೂರೈಕೆಗೆ ಬಳಕೆ, ಮೂಲಸೌಕರ್ಯ ಬಳಕೆಗೆ 100 ಕೋಟಿ ರೂಪಾಯಿ ನೀಡುವುದಾಗಿ ಸುಧಾಮೂರ್ತಿ ಘೋಷಿಸಿದ್ದಾರೆ....
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯ

ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ; ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ, ಪಂಜಾಬ್, ಬಿಹಾರ ಹಾಗೂ ಉತ್ತರಾಖಂಡ್ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ನಡೆಸುತ್ತಿದ್ದು, ಮಹಾಮಾರಿ ಸೋಂಕಿನ ವಿರುದ್ಧ ಕೇಂದ್ರ ಸರ್ಕಾರ ಒಗ್ಗಟ್ಟಿನ ಹೋರಾಟ ನಡೆಸಿದೆ. ದೇಶದ ಎಲ್ಲ ರಾಜ್ಯಗಳ ಜೊತೆ ಸಮನ್ವಯತೆ ಮಾಡಿಕೊಂಡು ಕೋವಿಡ್ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಲಸಿಕಾ ಅಭಿಯಾನದ ಕುರಿತು ಸಮಾಲೋಚನೆ ನಡೆಸುತ್ತಿದ್ದಾರೆ ಪ್ರಧಾನಿ ಮೋದಿ. ಎಲ್ಲ ರಾಜ್ಯ...
ರಾಷ್ಟ್ರೀಯಸಿನಿಮಾಸುದ್ದಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಕೊರೊನಾ ಪಾಸಿಟವ್ ; ಇನ್ ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿರುವ ನಟಿ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಮಕ್ಕಳಾದ ಸಮಿಶಾ, ವಯಾನ್ ಸೇರಿದಂತೆ ಅವರ ಇಡೀ ಕುಟುಂಬದವರಿಗೆ ಕೊರೊನಾ ಬಂದಿರುವುದು ಧೃಡಪಟ್ಟಿದೆ. ಈ ಬಗ್ಗೆ ಇನ್ ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿರುವ ನಟಿ, ರಾಜ್ ಕುಂದ್ರಾ ಸೇರಿದಂತೆ ಅವರ ಪೋಷಕರು ಮನೆಯವರು ಎಲ್ಲರೂ ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ಕಳೆದ 10 ದಿನ ನಾವು ತೀವ್ರ ಸಂಕಷ್ಟವನ್ನು ಅನುಭವಿಸಿದೆವು. ಮೊದಲಿಗೆ ನನ್ನ ಅತ್ತೆ ಹಾಗೂ ಮಾವರಿಗೆ ಕೊರೊನಾ ಪಾಸಿಟವ್ ಬಂತು, ಬಳಿಕ ಸಮಿಶಾ, ವಯಾನ್ ರಾಜ್,...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಜನತಾ ಕರ್ಫ್ಯೂನಿಂದ ತಗ್ಗದ ಸೋಂಕು, 2 ವಾರ ರಾಜ್ಯದಲ್ಲಿ ಲಾಕ್‌ಡೌನ್ ಪಕ್ಕಾ.? – ಕಹಳೆ ನ್ಯೂಸ್

ಬೆಂಗಳೂರು (ಮೇ. 07): ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್‌ಡೌನ್‌ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ. ಈಗಿರುವ ಜನತಾ ಕರ್ಫ್ಯೂ ಪರಿಣಾಮಕಾರಿಯಾಗಿ ಜಾರಿಗೆ ಬಂದಿದ್ದರೆ ಲಾಕ್‌ಡೌನ್‌ ವಿಧಿಸುವ ಅಗತ್ಯ ಬೀಳುತ್ತಿರಲಿಲ್ಲ. ಈಗಾಗಲೇ ಸೋಂಕಿತರಿಂದಾಗಿ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಿದೆ. ಬೆಡ್‌ಗಳು ಸಿಗುತ್ತಿಲ್ಲ. ಆಕ್ಸಿಜನ್‌ ಕೊರತೆಯಾಗಿದೆ. ಪರಿಸ್ಥಿತಿ ಇನ್ನೂ ಕೆಲ ದಿನಗಳ ಕಾಲ ಹೀಗೆಯೇ ಮುಂದುವರೆದರೆ ಇಡೀ ಆರೋಗ್ಯ ವ್ಯವಸ್ಥೆಯೇ ಕುಸಿದು ಹೋಗಲಿದೆ ಎಂಬ ಆತಂಕ ಉಂಟಾಗಿದೆ....
ರಾಜಕೀಯರಾಷ್ಟ್ರೀಯಸುದ್ದಿ

ಪರಿಸ್ಥಿತಿ ಕೈಮೀರಿದೆ, ಲಾಕ್ ಡೌನ್ ಮಾಡುವಂತೆ ಮೋದಿಗೆ ರಾಹುಲ್ ಗಾಂಧಿ ಬಹಿರಂಗ ಪತ್ರ – ಕಹಳೆ ನ್ಯೂಸ್

ದೆಹಲಿ(ಮೇ.07): ಪ್ರಧಾನಿ ನರೇಂದ್ರ ಮೋದಿಯವರ ವೈಫಲ್ಯ ಮತ್ತು ಕೇಂದ್ರದ ಶೂನ್ಯ ಕಾರ್ಯತಂತ್ರವು ದೇಶವನ್ನು ಸಂಪೂರ್ಣ ಲಾಕ್‌ಡೌನ್‌ನತ್ತ ತಳ್ಳುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಾನು ಸಂಪೂರ್ಣ ಲಾಕ್ ಡೌನ್ ವಿರೋಧಿಸುತ್ತೇನೆ ಎಂದ ಅವರು ಬಡವರಿಗೆ ಆರ್ಥಿಕ ಪ್ಯಾಕೇಜ್ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ವರ್ಷದ ಸಡನ್ ಲಾಕ್‌ಡೌನ್ ಜನರ ಮೇಲೆ ಭಾರೀ ಪರಿಣಾಮ ಬೀರಿತ್ತು. ಅದಕ್ಕಾಗಿಯೇ ನಾನು ಸಂಪೂರ್ಣ ಲಾಕ್‌ಡೌನ್‌ ವಿರೋಧಿಸುತ್ತೇನೆ ಎಂದಿದ್ದಾರೆ. ಆದರೆ ಪ್ರಧಾನ ಮಂತ್ರಿಯ...
ಬೆಂಗಳೂರುರಾಜಕೀಯಸುದ್ದಿ

ಕೋವಿಡ್ ನಿವಾರಣೆಗೆ ಅಣ್ಣಮ್ಮನ ಮೊರೆ ಹೋದ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ತಾಂಡವವಾಡುತ್ತಿದ್ದು, ಈ ನಡುವೆ ಮಾನ್ಯ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಇಂದು ಮುಂಜಾನೆ ಗಾಂಧಿನಗರದ ಬಳಿ ಇರುವ ಅಣ್ಣಮ ದೇವಿ ದೇವಸ್ಥಾನ ಕ್ಕೆ‌ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.     ಈ ವೇಳೆ ಮಾತನಾಡಿದ ಅವರು, ಕೋವಿಡ್ ದೂರ ಆಗಬೇಕು ಎಂದು ದೇವರಿಗೆ ಪ್ರಾರ್ಥನೆ ಮಾಡಿದ್ದೇನೆ. ರಾಜ್ಯದಲ್ಲಿ ಕೋವಿಡ್ ಜಾಸ್ತಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ ಕರೆಯಲಾಗಿದೆ. ಜನತಾ ಕರ್ಫ್ಯೂ ಯಾರು ಸರಿಯಾಗಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಗೆಲುವು ; ಮಹಿಳೆಗೆ ಗೆಲುವು ಇದೇ ಮೊದಲು – ಕಹಳೆ ನ್ಯೂಸ್

  ಬೆಳಗಾವಿ: ರಾಜ್ಯದಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ, ಕ್ಷೇತ್ರದ ಇತಿಹಾಸದಲ್ಲಿ ಇದೇ ಮೊದಲಿಗೆ ಮಹಿಳೆಯೊಬ್ಬರು ಇಲ್ಲಿ ವಿಜಯಿಯಾದ ಇತಿಹಾಸ ನಿರ್ಮಾಣವಾಗಿದೆ. ಪ್ರಥಮ ಪ್ರಯತ್ನದಲ್ಲೇ ಅವರು ಲೋಕಸಭೆ ಪ್ರವೇಶಿಸಿರುವುದು ಮತ್ತೊಂದು ವಿಶೇಷ. ಪ್ರತಿ ಸ್ಪರ್ಧಿ ಕಾಂಗ್ರೆಸ್‌ನ ಸತೀಶ ಜಾರಕಿಹೊಳಿ ಅವರು ತೀವ್ರ ಪೈಪೋಟಿ ನೀಡಿದ್ದರಿಂದಾಗಿ, ಆಡಳಿತ ಪಕ್ಷದ ಅಭ್ಯರ್ಥಿ ಮಂಗಲಾಗೆ ಗೆಲುವು ಸುಲಭದ...
1 281 282 283 284 285 319
Page 283 of 319