ನಟ ಉಮೇಶ್ ನಿಧನಕ್ಕೆ CM ಸಿದ್ದರಾಮಯ್ಯ ಸಂತಾಪ – ಕಹಳೆ ನ್ಯೂಸ್
ಬೆಂಗಳೂರು : ಕನ್ನಡದ ಹೆಸರಾಂತ ಹಿರಿಯ ಹಾಸ್ಯ ನಟ ಉಮೇಶ್ (80) ಅವರು ಇಂದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಟ ಉಮೇಶ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ. ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ...







