ಮಂಗಳೂರು ಗಲಭೆ; 21 ಮಂದಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು -ಕಹಳೆ ನ್ಯೂಸ್
ಮಂಗಳೂರು, ಸೆಪ್ಟೆಂಬರ್ 10: ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 21 ಪಿಎಫ್ ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸದಸ್ಯರಿಗೆ ಬುಧವಾರ ಜಾಮೀನು ನೀಡಿದೆ. 2019ರ ಡಿ. 19ರಂದು ಸಿಎಎ ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆಗ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿ ಠಾಣೆಗೆ ಬೆಂಕಿ ಹಚ್ಚಿದ ಆರೋಪದಡಿ...







