ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 75,760 ಹೊಸ ಕೇಸು, 33 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ -ಕಹಳೆ ನ್ಯೂಸ್
ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 75 ಸಾವಿರದ 760 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 33 ಲಕ್ಷ ಗಡಿ ದಾಟಿದೆ. ನಿನ್ನೆ ಒಂದೇ ದಿನ 75,760 ಹೊಸ ಕೇಸ್ ಜೊತೆಗೆ ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33,10,235ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ಸೋಂಕಿಗೆ ಸಾವಿರದ...







