ಬೆಂಗಳೂರಿಗೆ ಬರ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ : ಟಿಶ್ಯೂ ಪೇಪರ್‌ನಲ್ಲಿ ಬೆದರಿಕೆ ಪತ್ರ ಪತ್ತೆ – ಕಹಳೆ ನ್ಯೂಸ್
ಬೆಂಗಳೂರು: ಲಕ್ನೋದಿಂದ ಬೆಂಗಳೂರಿಗೆ ಬರ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಇತರ ಭದ್ರತಾ ಏಜೆನ್ಸಿಗಳು ತಕ್ಷಣವೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿವೆ ಎಂದು ಮೂಲಗಳು ತಿಳಿಸಿವೆ. ಇಂಡಿಗೋ ವಿಮಾನದಲ್ಲಿ (ಸಂಖ್ಯೆ 6E231) ಈ ಘಟನೆ ನಡೆದಿದೆ. ಬುಧವಾರ (ಇಂದು) ಬೆಂಗಳೂರಿಗೆ ಬಂದು ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಬೆದರಿಕೆ ಪತ್ರ ಪತ್ತೆಯಾಗಿದೆ. ಟಿಶ್ಯೂ ಪೇಪರ್‌ನಲ್ಲಿ ಬಾಂಬ್ ಬೆದರಿಕೆ ಬರೆಯಲಾಗಿತ್ತು ಎಂದು ತಿಳಿದುಬಂದಿದೆ....







