ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆ – ಕಹಳೆ ನ್ಯೂಸ್
ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ವಾಯು ಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.25 ರಂದು ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ...







