Monday, March 16, 2026

ರಾಷ್ಟ್ರೀಯ

ಅಂಕಣದೆಹಲಿಸುದ್ದಿ

ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಳ್ಳಿ ; ಭಾರತ ನೆಲದಿಂದ ಪಾಕ್‌ಗೆ ತಾಲಿಬಾನ್‌ ಸಚಿವ ಸಲಹೆ-ಕಹಳೆ ನ್ಯೂಸ್

ನವದೆಹಲಿ: ಭಯೋತ್ಪಾದಕ ಗುಂಪುಗಳನ್ನು ಅಫ್ಘಾನಿಸ್ತಾನ ನಿರ್ನಾಮ ಮಾಡಿದೆ. ಪಾಕಿಸ್ತಾನ ಕೂಡ ಅದೇ ಶಾಂತಿಯ ಮಾರ್ಗವನ್ನು ಅನುಸರಿಸಬೇಕು ಎಂದು ಭಾರತದ ನೆಲದಿಂದ ಪಾಕ್‌ಗೆ ತಾಲಿಬಾನ್‌  ಸಲಹೆ ನೀಡಿದೆ. ಅಫ್ಘಾನಿಸ್ತಾನದ ತಾಲಿಬಾನ್‌ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಅವರು ಶುಕ್ರವಾರ ಭಾರತಕ್ಕೆ ಭೇಟಿ ನೀಡಿದ್ದರು. ಇದೇ ವೇಳೆ, ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ನಂತಹ ಭಯೋತ್ಪಾದಕ ಗುಂಪುಗಳು ಅಫ್ಘಾನ್ ನೆಲದಿಂದ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿವೆ. ಆದರೆ, ಕಳೆದ ನಾಲ್ಕು ವರ್ಷಗಳಲ್ಲಿ ತಾಲಿಬಾನ್ ಎಲ್ಲಾ ಭಯೋತ್ಪಾದಕರನ್ನು...
ಬೆಂಗಳೂರುರಾಜ್ಯಸುದ್ದಿ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 12ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಏಳು ದಿನಗಳ ಅಲರ್ಟ್ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಕೋಲಾರದಲ್ಲಿ ಎರಡು ದಿನಗಳ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌  ನೀಡಲಾಗಿದೆ. ರಾಜ್ಯದ ಹಲವೆಡೆ ಇಂದು ದಿನವಿಡೀ ಮೋಡ ಕವಿದ ವಾತಾವರಣ ಮುಂದುವರಿಯುತ್ತದೆ ಎನ್ನಲಾಗಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಪ್ರದೇಶಗಳಲ್ಲಿ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ದೇವೇಗೌಡರ ಆರೋಗ್ಯ ವಿಚಾರಿಸಿದ ನಿರ್ಮಲಾನಂದನಾಥ ಶ್ರೀ- ಕಹಳೆ ನ್ಯೂಸ್

ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಶ್ರೀ ಎಚ್.ಡಿ. ದೇವೇಗೌಡ ಅವರನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶುಕ್ರವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಶ್ರೀಗಳು, ದೇವೇಗೌಡರೊಂದಿಗೆ ಕೆಲಕಾಲ ಮಾತುಕತೆ ನಡೆಸಿ, ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ದೇವೇಗೌಡರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಿ, ಎಂದಿನಂತೆ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಲಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಕನ್ನಡದ ಖ್ಯಾತ ನಟ ಉಮೇಶ್‌ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ..!- ಕಹಳೆ ನ್ಯೂಸ್

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟರಾದ ಎಂ.ಎಸ್‌.ಉಮೇಶ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 80 ವರ್ಷ ವಯಸ್ಸಿನವರಾದ ಉಮೇಶ್‌ ಕನ್ನಡದ ಬಹುತೇಕ ನಟರೊಂದಿಗೆ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದಾರೆ. ತಮ್ಮ ಹಾಸ್ಯಪಾತ್ರದ ಮೂಲಕ ಅವರು ರಾಜ್ಯದಾದ್ಯಂತ ಜನಪ್ರಿಯತೆ ಪಡೆದಿದ್ದರು. ಉಮೇಶ್‌ ಅವರು ಇತ್ತೀಚೆಗೆ ತಮ್ಮ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರು ಎನ್ನಲಾಗಿದೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ...
ದೆಹಲಿಸುದ್ದಿ

ಡೊನಾಲ್ಡ್ ಟ್ರಂಪ್​ಗೆ ಭಾರೀ ನಿರಾಸೆ; ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ನೊಬೆಲ್ ಶಾಂತಿ ಪ್ರಶಸ್ತಿ – ಕಹಳೆ ನ್ಯೂಸ್

ನವದೆಹಲಿ, ಅಕ್ಟೋಬರ್ 10: ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿ ಯಾರ ಪಾಲಾಗಲಿದೆ ಎಂಬ ಕುತೂಹಲ ಹೆಚ್ಚಾಗಿತ್ತು. ಏಕೆಂದರೆ ಈ ಬಾರಿಯ ರೇಸ್​ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಸೇರಿಕೊಂಡಿದ್ದರು. ತಮಗೇ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಬೇಕೆಂದು ಅವಕಾಶ ಸಿಕ್ಕಾಗಲೆಲ್ಲ ಘೋಷಿಸಿಕೊಳ್ಳುತ್ತಿದ್ದ ಟ್ರಂಪ್ ಅವರಿಗೆ ಭಾರೀ ನಿರಾಸೆಯಾಗಿದೆ. ವೆನೆಜುವೆಲಾದ ಜನರ ಪರವಾದ ಹೋರಾಟಕ್ಕಾಗಿ ಮರಿಯಾ ಕೊರಿನಾ ಮಚಾಡೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದೆ....
ಅಂಕಣದೆಹಲಿಸುದ್ದಿ

ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ; ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ-ಕಹಳೆ ನ್ಯೂಸ್

ನವದೆಹಲಿ: ಅಡುಗೆ ಸಲಕರಣೆ ತಯಾರಕ ಟಿಟಿಕೆ ಪ್ರೆಸ್ಟೀಜ್ ಲಿಮಿಟೆಡ್‌ನ ನಿವೃತ್ತ ಅಧ್ಯಕ್ಷ ಟಿಟಿ ಜಗನ್ನಾಥನ್  ಗುರುವಾರ ತಡರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಜಗನ್ನಾಥನ್‌ ಅವರು ಟಿಟಿಕೆ ಗ್ರೂಪ್‌ನ ಸ್ಥಾಪಕ ಮತ್ತು ಕೇಂದ್ರದ ಮಾಜಿ ಹಣಕಾಸು ಸಚಿವ ಟಿಟಿ ಕೃಷ್ಣಮಾಚಾರಿ ಅವರ ಸೋದರಳಿಯ. ಜಗನ್ನಾಥನ್ ಅವರನ್ನು ಹೆಚ್ಚಾಗಿ ‘ದಿ ಕಿಚನ್ ಮೊಗಲ್’ ಎಂದು ಕರೆಯಲಾಗುತ್ತದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಪನಿಯು, ಜಗನ್ನಾಥನ್‌ ಅವರ ಹಠಾತ್ ಮತ್ತು ಅನಿರೀಕ್ಷಿತ ನಿಧನವು ಕಂಪನಿಗೆ ತುಂಬಲಾರದ...
ಅಂಕಣದೆಹಲಿಸುದ್ದಿ

ಅ.17ಕ್ಕೆ ; ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟ-ಕಹಳೆ ನ್ಯೂಸ್

ನವದೆಹಲಿ: ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ (Tejas Mk1A) ಅ.17 ರಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತನ್ನ ಚೊಚ್ಚಲ ಹಾರಾಟ ನಡೆಸಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್)ನಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ, ತೇಜಸ್ Mk1A ಗಾಗಿ ಮೂರನೇ ಉತ್ಪಾದನಾ ಮಾರ್ಗ ಮತ್ತು HTT-40 ವಿಮಾನಕ್ಕಾಗಿ ಎರಡನೇ ಉತ್ಪಾದನಾ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಈ ಸಾಧನೆಯು ಭಾರತದ ರಕ್ಷಣಾ ಉತ್ಪಾದನಾ ವಲಯದಲ್ಲಿ ಸ್ವಾವಲಂಬನೆಯತ್ತ ಮಹತ್ವದ...
ಜಮ್ಮು ಮತ್ತು ಕಾಶ್ಮೀರರಾಜ್ಯರಾಷ್ಟ್ರೀಯಸುದ್ದಿ

ಕಾಶ್ಮೀರ: ನಾಪತ್ತೆಯಾಗಿದ್ದ ಎರಡನೇ ಪ್ಯಾರಾ-ಕಮಾಂಡೋನ ಮೃತದೇಹ ಪತ್ತೆ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಗಡೋಲ್ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಾಪತ್ತೆಯಾಗಿದ್ದ ಮತ್ತೊಬ್ಬ ಎಲೈಟ್ ಪ್ಯಾರಾ ಕಮಾಂಡೋನ ಮೃತದೇಹ ಪತ್ತೆಯಾಗಿದೆ. "ಅನಂತನಾಗ್ ಜಿಲ್ಲೆಯ ಕೊಕರ್ನಾಗ್ ಪ್ರದೇಶದ ಅರಣ್ಯಗಳಲ್ಲಿ ಭಯೋತ್ಪಾದಕರ ಪತ್ತೆಗಾಗಿ ನಡೆಯುತ್ತಿದ್ದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ನಾಪತ್ತೆಯಾಗಿದ್ದಾರೆ. ನಿನ್ನೆ ಒಬ್ಬರು ಪ್ಯಾರಾ ಕಮಾಂಡೋನ ಮೃತದೇಹವನ್ನು ಭದ್ರತಾ ಪಡೆ ಸಿಬ್ಬಂದಿ ವಶಪಡಿಸಿಕೊಂಡಿದ್ದರು. ಶೋಧ ಕಾರ್ಯಾಚರಣೆಯ ಸಮಯದಲ್ಲಿ ಇಂದು ಭದ್ರತಾ ಪಡೆ ಸಿಬ್ಬಂದಿ ಮತ್ತೊಬ್ಬ ಪ್ಯಾರಾ ಕಮಾಂಡೋನ...
1 61 62 63 64 65 320
Page 63 of 320