Tuesday, March 17, 2026

ರಾಷ್ಟ್ರೀಯ

ಅಂಕಣಜಮ್ಮು ಮತ್ತು ಕಾಶ್ಮೀರಸುದ್ದಿ

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ ; ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ-ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ  ಜೈಶ್-ಎ-ಮೊಹಮ್ಮದ್  ಸಂಘಟನೆ ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ನಾಲ್ವರು ಶಂಕಿತ ಉಗ್ರರನ್ನು ಭದ್ರತಾ ಪಡೆ ವಶಕ್ಕೆ ಪಡೆದುಕೊಂಡಿದೆ. ಶುಕ್ರವಾರ (ಸೆ.20) ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದೋಡಾ-ಉಧಂಪುರ ಗಡಿಯ ಬಳಿ ಗುಂಡಿನ ಚಕಮಕಿ ನಡೆದಿದ್ದು, ದಾಳಿಯಲ್ಲಿ ಗಾಯಗೊಂಡಿದ್ದ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ. ಇದೇ ವೇಳೆ ಜೈಶ್-ಎ-ಮೊಹಮ್ಮದ್ ಸಂಘಟನೆಯವರು ಎನ್ನಲಾದ ನಾಲ್ವರು...
ಅಂಕಣಬೆಂಗಳೂರುಸುದ್ದಿ

30 ಕೋಟಿ ಮೌಲ್ಯದ ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಖರೀದಿಸಿದ ; ಸತೀಶ್‌ ಜಾರಕಿಹೊಳಿ-ಕಹಳೆ ನ್ಯೂಸ್

ಬೆಂಗಳೂರು: ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಅನ್ನು ಸಚಿವ ಸತೀಶ್‌ ಜಾರಕಿಹೊಳಿ ಖರೀದಿಸಿದ್ದಾರೆ. ಈ ಹೆಲಿಕಾಪ್ಟರ್‌ನ ಬೆಲೆ 30 ಕೋಟಿ ರೂ.. ಅಗಸ್ಟ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಗಿದೆ. ಸತೀಶ್‌ ಜಾರಕಿಹೊಳಿ ಅವರು ಈ ಹಿಂದೆ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಹೊಂದಿದ್ದರು. ಹಳೆ ಹೆಲಿಕಾಪ್ಟರ್ ಮಾರಾಟ ಮಾಡಿ ಹೊಸ ಇಟಲಿ ಮೇಡ್ ಡಬಲ್ ಇಂಜಿನ್ ಅಗಸ್ಟ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ.  ...
ಅಂಕಣಬೆಂಗಳೂರುಸುದ್ದಿ

ಹಿಂದೂಗಳೆಂದರೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ?… ; ಅಶೋಕ್ ಕಿಡಿ-ಕಹಳೆ ನ್ಯೂಸ್

ಬೆಂಗಳೂರು: ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ  ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ ಎಂದು ವಿಪಕ್ಷ ನಾಯಕ ಆರ್ ಅಶೋಕ್  ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಹಿಂದೂಗಳ ದೇವಸ್ಥಾನ, ಹಬ್ಬ, ಆಚರಣೆಗಳಿಗೆ ಅಡಚಣೆ ಉಂಟು ಮಾಡುವುದರಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ  ಅದೆಂತಹ ವಿಕೃತ ಸಂತೋಷ ಸಿಗುತ್ತೋ ಗೊತ್ತಿಲ್ಲ. ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ, ನಮ್ಮ ಸಂಸ್ಕೃತಿಯ ಪ್ರತೀಕವಾದ ಅರಶಿಣ,...
ಅಂಕಣಬೆಂಗಳೂರುಸುದ್ದಿ

ಜಾತಿಗಣತಿ ಮುಂದೂಡಲ್ಲ, ಮುಂದೂಡಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ-ಕಹಳೆ ನ್ಯೂಸ್

ಬೆಂಗಳೂರು: ಜಾತಿಗಣತಿ  ಮುಂದೂಡಲ್ಲ, ಮುಂದೂಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಬಾರಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ  ಪ್ರತಿಕ್ರಿಯಿಸಿದ ಅವರು, ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಂವಿಧಾನಿಕ ಸಂಸ್ಥೆ. ಎಲ್ಲರ ಅಭಿಪ್ರಾಯ ಪಡೆದು ಅವರು ತೀರ್ಮಾನ ಮಾಡಿದ್ದಾರೆ. ಜಾತಿಗಣತಿ ಮುಂದೂಡಲ್ಲ ಎಂದು ತಿಳಿಸಿದ್ದಾರೆ. ಕ್ಯಾಬಿನೆಟ್‌ನಲ್ಲಿ ಸಚಿವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿ ಅವರು ರಾಜಕೀಯ ಮಾಡುತ್ತಿದ್ದಾರೆ. ನೀವು ಕೂಡ ರಾಜಕೀಯವಾಗಿ ಎದುರಿಸಬೇಕು. ಅದನ್ನ ಖಂಡಿಸಬೇಕು ಎಂದು ಸಚಿವರಿಗೆ ಹೇಳಿದ್ದೇನೆ ಎಂದಿದ್ದಾರೆ. ಗುರುವಾರ...
ಅಂಕಣಮುಂಬೈಸಿನಿಮಾಸುದ್ದಿ

ಟಾಕ್ಸಿಕ್‌ ಫೈನಲ್‌ ಶೂಟಿಂಗ್‌ ; ಮುನ್ನ ಲಂಡನ್‌ಗೆ ಹಾರಿದ ಯಶ್!-ಕಹಳೆ ನ್ಯೂಸ್

ಟಾಕ್ಸಿಕ್‌ (Toxic) ಚಿತ್ರದ ಫೈನಲ್‌ ಹಂತದ ಚಿತ್ರೀಕರಣಕ್ಕೂ ಮುನ್ನ ರಾಕಿಂಗ್‌ ಸ್ಟಾರ್‌ ಯಶ್‌  ಲಂಡನ್‌ಗೆ ಹಾರಿದ್ದಾರೆ. ಟಾಕ್ಸಿಕ್ ಸಿನಿಮಾದ ಆ್ಯಕ್ಷನ್ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಲಿವುಡ್‌ನ ಜೆಜೆ ಪರ‍್ರಿ 45 ದಿನಗಳ ಕಾಲ ಮುಂಬೈನಲ್ಲಿ  ಬೀಡುಬಿಟ್ಟು ಫೈಟ್ ಸೀನ್‌ ಮುಗಿಸಿಕೊಟ್ಟಿದ್ದಾರೆ. ಇದೀಗ ಕೊನೆಯ ಹಂತದ ಚಿತ್ರೀಕರಣ ಮಾತ್ರವೇ ಬಾಕಿ ಇದ್ದು ಅದು ಬೆಂಗಳೂರಿನಲ್ಲಿ ನಡೆಯಲಿದೆ. ಸೆಪ್ಟೆಂಬರ್ ಕೊನೆಯ ವಾರದಿಂದ ಟಾಕ್ಸಿಕ್ ಫೈನಲ್ ಹಂತದ ಚಿತ್ರೀಕರಣ ನಡೆಯಲಿದೆ. ಅದಕ್ಕೂ ಮುನ್ನ ಬಿಸಿನೆಸ್...
ಬೆಂಗಳೂರುರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ‘ಕ್ರೈಸ್ತ’ರ ರೊಚ್ಚು; ಸಿದ್ದರಾಮಯ್ಯ ನಿರ್ಧಾರಕ್ಕೆ ‘ಕ್ರಿಶ್ಚಿಯನ್ ಸೇವಾ ಸಂಘ’ ಆಕ್ರೋಶ -ಕಹಳೆ ನ್ಯೂಸ್

ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊರಹಾಕಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಒತ್ತಾಯಿಸಿದೆ. ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರತಿಪಾದಿಸುತ್ತಿರುವ ಕ್ರೈಸ್ತಧರ್ಮದ ಹಾಗೂ ಜನರ ಹಿತಾಸಕ್ತಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿರುವ ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಅವರು,...
ಬೆಂಗಳೂರುಸಿನಿಮಾಸುದ್ದಿ

ಬಹು ನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ – ಕಹಳೆ ನ್ಯೂಸ್

ಬೆಂಗಳೂರು : ಬಹು ನಿರೀಕ್ಷಿತ 'ಕಾಂತಾರ ಚಾಪ್ಟರ್ 1' ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಸೆ.22 ಟ್ರೇಲರ್ ರಿಲೀಸ್ ಆಗಲಿದೆ. ಕಾಂತಾರ ಚಾಪ್ಟರ್ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್ 2 ರಂದು ತೆರೆಗೆ ಬರಲಿದೆ. ಈ ಚಿತ್ರದ ಟ್ರೇಲರ್ ಸೆ.22 ರಂದು ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ರುಕ್ಮಿಣಿ ವಸಂತ್ ಜೋಡಿಯಾಗಿದ್ದಾರೆ. ನಟ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ...
ಅಂಕಣಮುಂಬೈಸುದ್ದಿ

iPhone 17 ಖರೀದಿಗೆ ನೂಕುನುಗ್ಗಲು ; ಆ್ಯಪಲ್‌ ಸ್ಟೋರ್‌ ಮುಂದೆ ಹೊಡೆದಾಡಿಕೊಂಡ ಗ್ರಾಹಕರು-ಕಹಳೆ ನ್ಯೂಸ್

ಮುಂಬೈ: ಆ್ಯಪಲ್‌ ಸ್ಟೋರ್‌ನಲ್ಲಿ ಹೊಸ ಐಫೋನ್‌ 17 ಖರೀದಿಗೆ ಉತ್ಸಾಹ ಜೋರಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಸ್ಟೋರ್‌ನಲ್ಲಿ ಐಫೋನ್‌ ಖರೀದಿಗೆ ಗ್ರಾಹಕರು ಪರಸ್ಪರ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಆ್ಯಪಲ್ ಅಂಗಡಿಯ ಹೊರಗೆ ನೂರಾರು ಗ್ರಾಹಕರು ಜಮಾಯಿಸಿದ್ದಾರೆ. ನೂಕುನುಗ್ಗಲು ಹೆಚ್ಚಾಗಿ ಪರಸ್ಪರರು ಜಗಳ ಮಾಡಿಕೊಂಡಿದ್ದಾರೆ. ಐಫೋನ್‌ಗೆ ನಾ ಮುಂದು ತಾ ಮುಂದು ಅಂತ ಎಲ್ಲರೂ ಪೈಪೋಟಿ ನಡೆಸಿದ್ದಾರೆ. ಗಲಾಟೆ ವೇಳೆ ಕೆಂಪು ಶರ್ಟ್‌ ಧರಿಸಿರುವ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯೊಬ್ಬರು ಹೊರಗಡೆ ಎಳೆದೊಯ್ಯುತ್ತಿರುವ...
1 72 73 74 75 76 320
Page 74 of 320