ಧರ್ಮಸ್ಥಳದ ಕುರಿತು ಅಪಪ್ರಚಾರ; ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭ -ಕಹಳೆ ನ್ಯೂಸ್
ಬೆಂಗಳೂರು : ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಇಂದಿನಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭವಾಗಿದೆ. ಬೆಂಗಳೂರಿನ ನೆಲಮಂಗಲ ಟೋಲ್ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಲಿದ್ದಾರೆ. "ಧರ್ಮಸ್ಥಳ ಚಲೋ" ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಪೂಜಾ ವಿಧಿವಿಧಾನ ನೆರವೇರಿಸಿ ನೂರಾರು ವಾಹನಗಳ ಅಭಿಯಾನವನ್ನು ಆರಂಭಿಸಲಾಯಿತು. ಅಪಪ್ರಚಾರ ಖಂಡಿಸಿ ಯಾತ್ರೆ ನಡೆಯುತ್ತಿದ್ದು,...







