ಅವಳಿ ಮಕ್ಕಳೊಂದಿಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಅಮೂಲ್ಯ ಜಗದೀಶ್ – ಕಹಳೆ ನ್ಯೂಸ್
ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಅವರು ಅವಳಿ ಮಕ್ಕಳೊಂದಿಗೆ ರಾಜ್ಯದ ಜನತೆಗೆ 74ನೇ ವರ್ಷದ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಅಮೂಲ್ಯ ಮತ್ತು ಇಬ್ಬರು ಮಕ್ಕಳು ವೈಟ್ ಡ್ರೆಸ್ ಹಾಕಿಕೊಂಡಿದ್ದಾರೆ. ಇಬ್ಬರನ್ನು ಕಾಲ ಮೇಲೆ ಕೂರಿಸಿಕೊಂಡು ಅಮೂಲ್ಯ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ನಟಿ ಅಮೂಲ್ಯ ಅವರು ಜಗದೀಶ್ ಅವರನ್ನು ಮದುವೆ ಆದ ನಂತರ ಸಿನಿಮಾ ರಂಗದಿಂದ ದೂರ ಉಳಿದಿದ್ದಾರೆ. ಈಗ ಅವಳಿ ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿ ಆಗಿದ್ದಾರೆ. ನಟಿ ಅಮೂಲ್ಯ ಮತ್ತು...







