ಆಪ್ತರ ಸಮ್ಮುಖದಲ್ಲಿ ನಡೆಯಿತು ಹರಿಪ್ರಿಯಾ – ವಸಿಷ್ಠಸಿಂಹ ಎಂಗೇಜ್‌ಮೆಂಟ್ – ಕಹಳೆ ನ್ಯೂಸ್
ನಟಿ ಅದಿತಿ ಹಸೆಮಣೆ ಏರಿದ ಬೆನ್ನಲ್ಲೇ ಸ್ಯಾಂಡಲ್‌ವುಡ್‌ನ ಮತ್ತೊಂದು ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹರಿಪ್ರಿಯಾ ಮತ್ತು ವಸಿಷ್ಠ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ದುಬೈನಲ್ಲಿ ಕೈ ಕೈ ಹಿಡಿದು ಓಡಾಡಿದ್ದ ಈ ಜೋಡಿಯ ಫೋಟೋ ಸಿಕ್ಕಾಪಟ್ಟೆ ಸಂಚಲನ ಮೂಡಿಸಿತ್ತು. ಈಗ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಚಂದನವನದ ಸದ್ಯದ ಹಾಟ್ ನ್ಯೂಸ್ ಎಂದರೆ ಹರಿಪ್ರಿಯಾ ಮತ್ತು ವಸಿಷ್ಠ ಜೋಡಿಯ ಪ್ರೇಮ ಕಹಾನಿ. ಕಳೆದ...







