Recent Posts

Thursday, June 18, 2026

ಸುದ್ದಿ

ಬೆಂಗಳೂರುಸುದ್ದಿ

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ : MBBS ವಿದ್ಯಾರ್ಥಿನಿ ಸಾವು – ಕಹಳೆ ನ್ಯೂಸ್

ಬೆಂಗಳೂರು: ಕಾಲೇಜು ಮುಗಿಸಿ ಗೇಟ್‌ನಿಂದ ಹೊರಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ  ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ. ಮೃತಳನ್ನು ಕೃತಿಕಾ (21) ಎಂದು ಗುರುತಿಸಲಾಗಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಹಂಸ (21) ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಎಂಬಿಬಿಎಸ್ ಓದುತ್ತಿದ್ದರು ಎಂದು ತಿಳಿದುಬಂದಿದೆ. ಇಬ್ಬರು ಆಕ್ಟೀವಾದಲ್ಲಿ ಕಾಲೇಜು ಮುಗಿಸಿ ಗೇಟ್ ಹೊರಗೆ ಬಂದಿದ್ದರು. ಈ ವೇಳೆ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮನೆಯಲ್ಲಿ ಎಂಡಿಎಂಎ ದಾಸ್ತಾನು – ನಾಲ್ವರು ಆರೋಪಿಗಳ ಸೆರೆ – ಕಹಳೆ ನ್ಯೂಸ್

ವಿಟ್ಲ : ಮನೆಯಲ್ಲಿ ಎಂಡಿಎಂಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತುಗಳನ್ನು ವಿಟ್ಲ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡ ಘಟನೆ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಬಂಧಿತರಿಂದ ರೂ 1,79,700/- ಅಂದಾಜು ಮೌಲ್ಯದ 17.97 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ನಿವಾಸಿ ಅಶ್ರಫ್ ಜಿ (38), ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್...
ಸುದ್ದಿ

ಹೋಟೆಲ್‌ನಲ್ಲಿ ಬ್ರೇಕ್‌ಫಾಸ್ಟ್ ಮಾಡಿದವರಿಗೆ 30 ರೂ. ಗ್ಯಾಸ್‌ ಸಪ್ಲೈ ಚಾರ್ಜ್‌ : ಗ್ರಾಹಕರ ಆಕ್ರೋಶ

ಬೆಂಗಳೂರು: ಇರಾನ್‌ – ಇಸ್ರೇಲ್‌ ಯುದ್ಧದ ಪರಿಣಾಮದಿಂದ ನಗರದಲ್ಲಿ ಅಡುಗೆ ಅನಿಲದ ಅಭಾವ ಉಂಟಾಗಿದೆ. ಇದರ ಪರಿಣಾಮ ಗ್ರಾಹಕರಿಗೂ ತಟ್ಟುತ್ತಿದ್ದು, ಹೋಟೆಲ್‌ ಒಂದರಲ್ಲಿ ಬ್ರೇಕ್‌ಫಾಸ್ಟ್‌ ಮಾಡಿದವರಿಗೆ ಗ್ಯಾಸ್‌ ಸಪ್ಲೈ ಚಾರ್ಜ್‌ ಕೂಡ ಸೇರಿಸಿ ಬಿಲ್‌ ನೀಡಲಾಗಿದೆ. ಇದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನ ಪಿಜಿಯಲ್ಲಿ ತಿಂಡಿ ಸಿಗದ ಕಾರಣ ಗ್ರಾಹಕರೊಬ್ಬರು Mr. ಆಂಧ್ರ ಮೀಲ್ಸ್ ಹೋಟೆಲ್‌ಗೆ ತೆರಳಿದ್ದರು. ಅಲ್ಲಿ ಬ್ರೇಕ್‌ಫಾಸ್ಟ್‌ ತೆಗೆದುಕೊಂಡ ಬಳಿಕ ಅದರಲ್ಲಿ ಗ್ಯಾಸ್‌ ಸಪ್ಲೈ ಚಾರ್ಜ್‌ ಹೆಚ್ಚುವರಿಯಾಗಿ ಸೇರಿದ್ದನ್ನು...
ಸುದ್ದಿ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ : ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು – ಕಹಳೆ ನ್ಯೂಸ್

ವಿಧಾನಸೌಧ (ಬೆಂಗಳೂರು): ಬೆಂಗಳೂರಿನಲ್ಲಿರುವ ಆಸ್ಟ್ರೇಲಿಯನ್ ಕೌನ್ಸುಲೇಟ್ ಜನರಲ್‌ ಕಚೇರಿಯ ಕೌನ್ಸುಲ್ ಜನರಲ್ ಹಿಲರಿ ಮ್ಯಾಕ್ ಗೀಚಿ ಮತ್ತು ಉಪ ಕೌನ್ಸುಲ್ ಹ್ಯಾರೀಟ್ ಅವರನ್ನೊಳಗೊಂಡ ನಿಯೋಗ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ‌, ಮಾತುಕತೆ ನಡೆಸಿತು. ಇದೇ ವೇಳೆ ಸಚಿವರೊಂದಿಗೆ ಉಭಯ ದೇಶಗಳ ನಡುವಿನ ಹಲವು ವಿಚಾರಗಳನ್ನು ಚರ್ಚೆ ನಡೆಸಲಾಯಿತು. ಕರ್ನಾಟಕದಲ್ಲಿ ಮಹಿಳೆಯರಿಗಾಗಿ ಜಾರಿಗೆ ತಂದಿರುವ‌ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳ...
ಜಿಲ್ಲೆಸುದ್ದಿ

ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿಗೂ ಅಧಿಕ ಹಣ ಲೂಟಿ – 11 ಜನರ ವಿರುದ್ಧ FIR – ಕಹಳೆ ನ್ಯೂಸ್

ಬಾಗಲಕೋಟೆ: ಫಸಲ್‌ ಭೀಮಾ ಯೋಜನೆ ಬೆಳೆ ವಿಮೆಯಲ್ಲಿ 30 ಕೋಟಿ ರೂ.ಗೂ ಅಧಿಕ ಹಣ ಲೂಟಿ ಹೊಡೆದ 11 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಈ ಸಂಬಂಧ ಮುಧೋಳ ಸಹಾಯಕ ಕೃಷಿ ನಿರ್ದೇಶಕ ಸಿದ್ದಲಿಂಗೇಶ ದೊಡ್ಡಮನಿ ಎಂಬುವವರು ದೂರು ನೀಡಿದ್ದು, ದೂರಿನ ಆಧಾರದ ಮಾ.10ರಂದು ಮೇಲೆ ಮೆಟಗುಡ್ಡ ಗ್ರಾಮದ ಕಲ್ಲಪ್ಪ ಹುಣಸೀಕಟ್ಟಿ, ಶ್ರೀನಿವಾಸ ಪಾಟಿಲ್, ಕಲ್ಮೇಶ್ ಜುನ್ನೂರ, ಶ್ರೀನಿವಾಸ ಹುಣಸೀಕಟ್ಟಿ, ರಮೇಶ್ ಹುಣಸೀಕಟ್ಟಿ, ಪ್ರಶಾಂತ ಕೋಮಾರ, ಶ್ರೀಕಾಂತ ಹಲಗಲಿ,...
ಸುದ್ದಿ

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ – ಕಹಳೆ ನ್ಯೂಸ್

ಬಂದಾರು :ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಮಾ 11 ರಂದು ಅಂಡೆಕೇರಿ ಬದ್ರಿಯಾ ಜುಮಾ ಮಸೀದಿಯವರರು ಶುದ್ಧ ನೀರಿನ ಘಟಕದ ಕೊಡುಗೆ ನೀಡಿ ಶಾಲಾ ವಠಾರದಲ್ಲಿ ಹಸ್ತಾoತರಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ ನಿರುoಬುಡ, ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಂದ್ರಾವತಿ, ಮೋಹನ್ ಬಟ್ಟೆಮಾರು,ಶಫೀಕ್ ಅಹ್ಸನಿ ಕಾಮಿಲ್,ಧರ್ಮ ಗುರುಗಳು ಬಿಜೆಎಮ್ ಅಂಡೆಕೇರಿ,ಅಬ್ದುಲ್ ಹಮೀದ್ ಅಧ್ಯಕ್ಷರು ಬಿಜೆ ಎಮ್ ಅಂಡೆಕೇರಿ,ಬಾವಂಞಿ ಗಲ್ಫ್...
ರಾಜ್ಯರಾಷ್ಟ್ರೀಯಸುದ್ದಿ

ಕತಾರ್‌ನಲ್ಲಿ ಸಿಲುಕಿಕೊಂಡಿದ್ದ 500 ಭಾರತೀಯರು ತಾಯ್ನಾಡಿಗೆ ವಾಪಸ್ – ಕಹಳೆ ನ್ಯೂಸ್

ದೋಹಾ :ಕತಾರ್‌ನಲ್ಲಿ ಸಿಲುಕಿರುವ 500 ಕ್ಕೂ ಹೆಚ್ಚು ಭಾರತೀಯರನ್ನು ನವದೆಹಲಿ ಮತ್ತು ಇತರ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಇಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ, ಪಶ್ಚಿಮ ಏಷ್ಯಾದ ದೇಶದಲ್ಲಿ ಇನ್ನೂ ಇರುವವರಿಗೆ ಯಾವುದೇ ಗುರುತಿಸಲಾಗದ ವಸ್ತುಗಳು, ಭಗ್ನಾವಶೇಷಗಳು ಅಥವಾ ತುಣುಕುಗಳನ್ನು ಸಮೀಪಿಸದಂತೆ ಎಚ್ಚರಿಕೆ ನೀಡಲಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಕತಾರ್‌ ಏರ್‌ವೇಸ್‌‍ ಇಂದು ಭಾರತಕ್ಕೆ ಎರಡು ವಿಮಾನಗಳನ್ನು ಹಾರಿಸಲು ನಿರ್ಧರಿಸಲಾಗಿದೆ ಎಂದು ಕತಾರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ...
ಜಿಲ್ಲೆಸುದ್ದಿ

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್ -ಕಹಳೆ ನ್ಯೂಸ್

ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದರುವುದಾಗಿ ತಿಳಿದುಬಂದಿದೆ. ಸಹಪಾಠಿಯಿಂದ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ...
1 107 108 109 110 111 3,396
Page 109 of 3396