Recent Posts

Thursday, June 18, 2026

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ,,ಕೆ. ಏಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಶ್ರೀರಾಮ ಭಜನಾ ಮಂದಿರ ಅಲ್ಲಿಪಾದೆ, ಮಹಿಳಾ ಜ್ಞಾನವಿಕಾಸ ಕೇಂದ್ರ ಅಲ್ಲಿಪಾದೆ, ನಾವೂರು ಇವರ ಸಹಬಾಗಿತ್ವದಡಿಯಲ್ಲಿ ಅಲ್ಲಿಪಾದೆ ಶ್ರೀರಾಮ ಭಜನಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸನ ಶಿಬಿರ ಮಾ. 11 ಬುಧವಾರ ಜರಗಿತು. ಕಾರ್ಯಕ್ರಮವನ್ನು ವಲಯ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಮನ್ಮಥರಾಜ್ ಜೈನ್ ಉದ್ಘಾಟಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಧರ್ಮಾಚರಣೆಯ ಮೂಲಕ ಆಧ್ಯಾತ್ಮಿಕ ಬಲ ಹೆಚ್ಚಿಸಿ ಹಿಂದೂ ರಾಷ್ಟ್ರ ಸ್ಥಾಪನೆಗೆ ಕಟಿಬದ್ಧರಾಗಿ: ಪೂಜ್ಯ ರಮಾನಂದ ಗೌಡ ಕರೆ -ಕಹಳೆ ನ್ಯೂಸ್

ಮಂಗಳೂರು  : "ಧರ್ಮವೇ ರಾಷ್ಟ್ರದ ಅಧಿಷ್ಠಾನವಾಗಿದೆ. ಪ್ರಸ್ತುತ ಕಲಿಯುಗದಲ್ಲಿ ಮನುಷ್ಯನು ಲೌಕಿಕ ಸುಖವನ್ನೇ ಸತ್ಯವೆಂದು ನಂಬಿ 'ನಾನು ಮತ್ತು ನನ್ನದು' ಎಂಬ ಭ್ರಮೆಯಲ್ಲಿದ್ದಾನೆ. ಈ ಭ್ರಮೆಯಿಂದ ಹೊರಬಂದು ಧರ್ಮದ ಜ್ಞಾನವನ್ನು ಪಡೆದು, ಸಾಧನೆಯ ಮೂಲಕ ಆಧ್ಯಾತ್ಮಿಕ ಬಲವನ್ನು ಹೆಚ್ಚಿಸಿಕೊಂಡರೆ ಮಾತ್ರ ಹಿಂದೂ ರಾಷ್ಟ್ರದ ಸ್ಥಾಪನೆ ಸಾಧ್ಯ" ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂಜ್ಯ ರಮಾನಂದ ಗೌಡ ಅವರು ಮಾರ್ಗದರ್ಶನ ಮಾಡಿದರು. ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನ ಕುದ್ರೋಳಿ ಶ್ರೀ...
ಸುದ್ದಿ

ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಿಂದ “ಜ್ಞಾನ ವಿಕಾಸ ” ಕಾರ್ಯಕ್ರಮ ದಡಿಯಲ್ಲಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ-ಕಹಳೆ ನ್ಯೂಸ್

ಕಾಸರಗೋಡು ಜಿಲ್ಲೆಯ ಚೆoಗಳ ಪಂಚಾಯತಿನ ಒಂದನೇ ವಾರ್ಡಿನ ಮೀನಾಡಿ ಪಲ್ಲ ಯಮುನಾ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಸರಗೋಡು ತಾಲೂಕಿನ ವಾತ್ಸಲ್ಯ ಸದಸ್ಯರಾದ ಯಮುನಾ ರವರಿಗೆ ಕ್ಷೇತ್ರದಿಂದ ಮಂಜೂರಾದ ವಾತ್ಸಲ್ಯ ಮನೆಯ ಹಸ್ತಾಂತರ ಕಾರ್ಯಕ್ರಮವನ್ನು ಕಾಸರಗೋಡು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಅಖಿಲೇಶ್ ನಗಮಗಂ ಅವರ ಅಧ್ಯಕ್ಷತೆಯಲ್ಲಿ ಚೆoಗಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಸಂತ ಅಜಕ್ಕೋಡು ನಾಮಫಲಕ ಅನಾವರಣ ಮಾಡಿದರು. ದಕ್ಷಿಣ ಕನ್ನಡ -2...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಬಾಲಿವುಡ್ ನಟ ಅರ್ಜುನ್ ಕಪೂರ್: ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಕೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ  : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ಸ್ಟಾರ್ ನಟ ಅರ್ಜುನ್ ಕಪೂರ್ ಭೇಟಿ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ದ ಅವರು, ವಿವಿಧ ವಿಶೇಷ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಶನಿವಾರವೇ ಕ್ಷೇತ್ರಕ್ಕೆ ಆಗಮಿಸಿದ್ದ ಅರ್ಜುನ್ ಕಪೂರ್, ಭಾನುವಾರ ಅತ್ಯಂತ ಫಲದಾಯಕವೆಂದು ನಂಬಲಾದ ‘ಸರ್ಪ ಸಂಸ್ಕಾರ’ ಸೇವೆಯನ್ನು ನೆರವೇರಿಸಿದರು. ಸೋಮವಾರ ಬೆಳಿಗ್ಗೆ ನಡೆದ...
ಬೆಂಗಳೂರುರಾಜ್ಯಸುದ್ದಿ

*ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ -ಕಹಳೆ ನ್ಯೂಸ್

 ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಬುಧವಾರ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ನೆರಿಯದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ – ಕಹಳೆ ನ್ಯೂಸ್

ನೆರಿಯ : ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಮಾರ್ಚ್ 10 ರಂದು ನೆರಿಯದ ಬಯಲು ಬಸದಿಯ ಹತ್ತಿರ ಶ್ರೀಮತಿ ಶಿಲ್ಲಿಯವರ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಂಡಾಜೆ ಪ್ರಾ.ಕೃ.ಪ.ಸ.ಸಂಘ(ನಿ.), ಅಧ್ಯಕ್ಷರಾದ ಶ್ರೀ ಪ್ರಕಾಶ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನಾಪತ್ತೆಯಾದ ಕೊಣಾಜೆ ನಿವಾಸಿ ಮೃತದೇಹ , ಸೋಮೇಶ್ವರ ಕೆರೆಯಲ್ಲಿ ಮೃತದೇಹ ಪತ್ತೆ -ಕಹಳೆ ನ್ಯೂಸ್

ಉಳ್ಳಾಲ: ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಮೃತದೇಹ ಸೋಮೇಶ್ವರ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕೊಣಾಜೆ ಗ್ರಾಮ ಮುಚ್ಚಿಲಕೋಡಿ ಮನೆ ನಿವಾಸಿ ದಿನೇಶ್ ಶೆಟ್ಟಿಗಾರ್ ಎಂಬವರ ಪುತ್ರ ವಿವೇಕ್ ಶೆಟ್ಟಿಗಾರ್ (32) ಮೃತದೇಹ ಪತ್ತೆಯಾಗಿದೆ. ಸೋಮೇಶ್ವರ ಕೆರೆಯಲ್ಲಿ ವಿವೇಕ್ ಶೆಟ್ಟಿಗಾರ್ ಅವರ ಮೃತದೇಹ ಪತ್ತೆಯಾಗಿದೆ. ಮಾಹಿತಿ ಪ್ರಕಾರ, ನಾಪತ್ತೆಯಾದ ದಿನವೇ ವಿವೇಕ್ ತಮ್ಮ ಸ್ಕೂಟರನ್ನು ಸೋಮೇಶ್ವರ ರಥದ ಕೊಠಡಿ ಸಮೀಪ ನಿಲ್ಲಿಸಿದ್ದು ಕಂಡುಬಂದಿದೆ....
ಸುದ್ದಿ

ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ ಚಿನ್ನಾಭರಣ ಕಳವು ; ಮಧ್ಯಪ್ರದೇಶ ಮೂಲದ ಆರೋಪಿ ಸೆರೆ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ- ಕಹಳೆ ನ್ಯೂಸ್

ಮಂಗಳೂರು : ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ಮಧ್ಯಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. 2025ರ ನವೆಂಬರ್ 19ರಂದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನವನ್ನು ಕಳವುಗೈದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ : 132/2025, ಕಲಂ :303(2) BNS ರಂತೆ ಪ್ರಕರಣ ದಾಖಲಿಸಲಾಗಿತ್ತು. ಆರೋಪಿ ಮಧ್ಯಪ್ರದೇಶ...
1 108 109 110 111 112 3,396
Page 110 of 3396