ಅಕ್ರಮವಾಗಿ ಪಾಸ್ ಪೋರ್ಟ್ ಪಡೆಯಲು ನೆರವು: ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ಬಂಧನ- ಕಹಳೆ ನ್ಯೂಸ್
ವಿಟ್ಲ : ವ್ಯಕ್ತಿಯೊಬ್ಬರು ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ಪಾಸ್‌ಪೋರ್ಟ್ ಪಡೆಯಲು ನೆರವಾದ ಹಾಗೂ ಆ ವ್ಯಕ್ತಿ ಪೊಲೀಸ್ ನಿರಾಕ್ಷೇಪಣಾ ಪತ್ರ ಒದಗಿಸಿದ ಕಡತಗಳನ್ನು ನಾಶಪಡಿಸಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರದೀಪ್ ಎಂಬುವರನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪ್ರದೀಪ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಕ್ತಿದಾಸ್ ಎಂಬಾತ ಅಕ್ರಮವಾಗಿ ಪಾಸ್ ಪೋರ್ಟ್ ಪಡೆಯಲು ಪೊಲೀಸ್ ನಿರಾಕ್ಷೇಪಣಾ ಪತ್ರ ಒದಗಿಸಲು ಆರೋಪಿ...







