Friday, March 20, 2026

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ : ಲಾಂಛನ ಬಿಡುಗಡೆ – ಕಹಳೆ ನ್ಯೂಸ್

ವಿಟ್ಲ: ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಿನ್ನೆಲೆಯಲ್ಲಿ ಲಾಂಛನ ಬಿಡಗಡೆ ಕಾರ್ಯಕ್ರಮ ಶೃಂಗೇರಿಯಲ್ಲಿ ನಡೆಯಿತು. ಶೃಂಗೇರಿ ದಕ್ಷಿಣಾಮ್ನಾಯ ಶಾರಾದಾಪೀಠದ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ವಿದುಶೇಖರ ಭಾರತೀ ಮಹಾಸ್ವಾಮೀಜಿಯವರು ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ದಿನಾಂಕವನ್ನು ಘೋಷಿಸಿ, ಬ್ರಹ್ಮಕಲಶಾಭಿಷೇಕದ ಲಾಂಛನವನ್ನು ಲೋಕಾರ್ಪಣೆಗೊಳಿಸಿ ಸ್ವರ್ಣ ಮಂತ್ರಾಕ್ಷತೆಯನ್ನಿತ್ತು ಹರಸಿದರು. ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ರಘುರಾಮ ಕಾರಂತ ಪದ್ಯಾಣ, ಅಧ್ಯಕ್ಷರಾದ ಅರವಿಂದ ಭಟ್ ಪದ್ಯಾಣ, ಆಡಳಿತ ಮೊಕ್ತೇಸರ ಸೇರಾಜೆ ಸತ್ಯನಾರಾಯಣ ಭಟ್, ಕಾರ್ಯದರ್ಶಿ...
ಸುದ್ದಿ

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ – ಕಹಳೆ ನ್ಯೂಸ್

ಧರ್ಮಸ್ಥಳ (ಡಿ. 19): ಗ್ರಾಮ ಪಂಚಾಯತ್ ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ(ರಿ.), ಸೇವಾಭಾರತಿ(ರಿ.), ಕನ್ಯಾಡಿ, ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇದರ ಸಹಭಾಗಿತ್ವದಲ್ಲಿ ಸ್ವ- ಸಹಾಯ ಸಂಘದ ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ ಡಿಸೆಂಬರ್ 19 ರಂದು ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಶ್ರೀನಿವಾಸ್ ರಾವ್...
ಕ್ರೈಮ್ರಾಜ್ಯಸುದ್ದಿ

3 ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯನ್ನೇ ಕೊಂದ ಖತರ್ನಾಕ್‌ ಮಕ್ಕಳು -ಕಹಳೆ ನ್ಯೂಸ್

ಚೆನ್ನೈ: ತಿರುವಲ್ಲೂರು ಜಿಲ್ಲೆಯಲ್ಲಿ ನಡೆದ ಹಾವು ಕಡಿತ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಜನ್ಮಕೊಟ್ಟ ಮಕ್ಕಳೇ ಇನ್ಶುರೆನ್ಸ್ ಹಣಕ್ಕಾಗಿ ಹಾವು ಬಿಟ್ಟು ತಂದೆಯನ್ನ ಹತ್ಯೆ ಮಾಡಿಸಿರೋದು ಎಸ್‌ಐಟಿ ತನಿಖೆಯಲ್ಲಿ ಬಯಲಾಗಿದೆ. ಹೌದು. ಆರಂಭದಲ್ಲಿ ಇದು ಹಾವು ಕಡಿತದಿಂದ ಆಗಿರುವ ಸಹಜ ಪ್ರಕರಣ ಅಂತ ಭಾವಿಸಲಾಗಿತ್ತು. ಆದ್ರೆ, ಇನ್ಶುರೆನ್ಸ್ ಕಂಪನಿ ಹಣ ನೀಡುವ ಪ್ರಕ್ರಿಯೆ ವೇಳೆ ಅನುಮಾನ ವ್ಯಕ್ತವಾಯಿತು. ಬಳಿಕ ವಿಶೇಷ ತನಿಖಾ ತಂಡ ಪ್ರಕರಣ ಕೈಗೆತ್ತಿಕೊಂಡಿತು ಎಂದು ವರದಿಗಳು ತಿಳಿಸಿವೆ....
ಸುದ್ದಿ

ಡಿ. 24ರಂದು ಬ್ಲೂಬರ್ಡ್ -6 ಉಡಾವಣೆ ಮಾಡಲಿರುವ ಇಸ್ರೋ

ಯುನೈಟೆಡ್ ಸ್ಟೇಟ್ಸ್ ಅಭಿವೃದ್ಧಿಪಡಿಸಿದ ಅತಿದೊಡ್ಡ ವಾಣಿಜ್ಯ ಸಂವಹನ ಉಪಗ್ರಹಗಳಲ್ಲಿ ಒಂದಾದ ಬ್ಲೂಬರ್ಡ್ -6 ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಡಿ. 24, 2025 ರಂದು ಬೆಳಿಗ್ಗೆ 8.54 ಕ್ಕೆ ಉಡಾವಣೆ ಮಾಡಲಿದೆ. ಅನೇಕ ವಿಳಂಬಗಳು ಮತ್ತು ಸುದೀರ್ಘ ಕಾಯುವಿಕೆಯ ನಂತರ, ಇಸ್ರೋ ಶುಕ್ರವಾರ ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್ ನಲ್ಲಿ ಉಡಾವಣಾ ದಿನಾಂಕವನ್ನು ಘೋಷಿಸಿತು. ಬಾಹುಬಲಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಇಸ್ರೋದ ಉಡಾವಣಾ ವಾಹನ ಮಾರ್ಕ್...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ `ಹೃದಯಾಘಾತ’ ಕ್ಕೆ ಮತ್ತೆ ಮೂವರು ಬಲಿ : ಶಿಕ್ಷಕಿ ಸೇರಿ ಮೂವರು ಸಾವು.! – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಮತ್ತೆ ಮೂವರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಹಿರಿಯ ಪತ್ರಕರ್ತ ಸಾವನ್ನಪ್ಪಿದ್ದಾರೆ, ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಶಿಕ್ಷಕಿ ಸೇರಿ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ (58), ಹೊಳೆನರಸೀಪುರ ತಾಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್ (35) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸುಧಾಮಣಿ ಅವರು ದೊಡ್ಡಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದರು. ಪರಮೇಶ್ ಹೊಳೆನರಸೀಪುರ ಹೋಟೆಲ್...
ಜಿಲ್ಲೆಬಳ್ಳಾರಿಸುದ್ದಿ

ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳುವು ಪ್ರಕರಣ: ಬಳ್ಳಾರಿ ಮೂಲದ ಚಿನ್ನದ ವ್ಯಾಪಾರಿ ಗೋವರ್ಧನ್ ಅರೆಸ್ಟ್ – ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಎಸ್ ಐಟಿ ಅಧಿಕಾರಿಗಳು ಬಳ್ಳಾರಿ ಚಿನ್ನದ ವ್ಯಾಪಾರಿ ಗೋವರ್ಧನ್ ಅವರನ್ನು ಬಂಧಿಸಿದ್ದಾರೆ. ಬಳ್ಳಾರಿಯ ರೊದ್ದಂ ಜ್ಯುವೆಲರಿ ಶಾಪ್ ಮಾಲೀಕರಾಗಿರುವ ಗೋವರ್ಧನ್ ಅವರನ್ನು ವಿಚಾರಣೆ ಹಿನ್ನೆಲೆಯಲ್ಲಿ ಕೇರಳಕ್ಕೆ ಕರೆಸಿಕೊಂಡಿದ್ದ ಎಸ್ ಐಟಿ ಅಧಿಕಾರಿಗಳು ವಿಚಾರಣೆ ಬಳಿಕ ಗೋವರ್ಧನ್ ಅವರನ್ನು ಬಂಧಿಸಿದ್ದಾರೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳುವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ನಿಂದ ಚಿನ್ನ ಖರೀದಿಸಿರುವ ಆರೋಪದಡಿ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕುದುರೆಮುಖಕ್ಕೆ ಚಾರಣ ಹೋಗಲು ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ: ಹಲವರಿಗೆ ಗಾಯ – ಕಹಳೆ ನ್ಯೂಸ್

ಚಿಕ್ಕಮಗಳೂರು: ಕುದುರೆಮುಖ ಚಾರಣ ಹೋಗಲು ಪ್ರವಾಸಿಗರು ತೆರಳುತ್ತಿದ್ದ ಖಾಸಗಿ ಬಸ್ ಕಳಸ ಸಮೀಪದ ಕಂಚಿಗಾನೆ ತಿರುವಿನಲ್ಲಿ ಶನಿವಾರ ಬೆಳಿಗ್ಗೆ 5.30ರ ಸುಮಾರಿನಲ್ಲಿ ಪಲ್ಟಿಯಾಗಿದೆ. ಬಸ್‌ನಲ್ಲಿ 48 ಜನ ಪ್ರಯಾಣ ಮಾಡುತ್ತಿದ್ದರು. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, 14 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರನ್ನು ಕಳಸ ಪಟ್ಟಣದ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿದರು....
ಬೆಂಗಳೂರುರಾಜ್ಯಸುದ್ದಿ

ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಲ್ಲಿನ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೊಲೆರೋ ಹಾಗೂ ಬಲ್ಕರ್ ವಾಗನಗಳು ಮುಖಾಮುಖಿ ಡಿಕ್ಕಿಯಾಗಿವೆ. ಜಕ್ಕೇನಹಳ್ಲಿ ಮೂಲದ 25 ವರ್ಷದ ಅಶೋಕ್ ಹಾಗೂ ಬಲ್ಕರ್ ವಾಹನ ಸವಾರ ಆಂಧ್ರ ಮೂಲದ ನಾಗರಾಜಪ್ಪ ಮೃತ ದುರ್ದೈವಿಗಳು. ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು...
1 115 116 117 118 119 3,299
Page 117 of 3299