ಭಾರೀ ಹೈಡ್ರಾಮಾ : ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಲು ಶಿಮ್ಲಾಕ್ಕೆ ತೆರಳಿದ್ದ ದೆಹಲಿ ಪೊಲೀಸರೇ ವಶಕ್ಕೆ-ಕಹಳೆನ್ಯೂಸ್
ನವದೆಹಲಿ/ಶಿಮ್ಲಾ: ಇತ್ತೀಚೆಗೆ ದೆಹಲಿಯಲ್ಲಿ ನಡೆದಿದ್ದ ಎಐ ಇಂಪ್ಯಾಕ್ಟ್ ಶೃಂಗ ಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿ, ಕರೆತರುವಾಗ ಭಾರೀ ನಾಟಕೀಯ ಬೆಳವಣಿಗೆ ನಡೆದಿದೆ. ಆರೋಪಿಗಳನ್ನ ಬಂಧಿಸಲು ಹಿಮಾಚಲ ಪ್ರದೇಶದ ಶಿಮ್ಲಾ ತೆರಳಿದ್ದ ದೆಹಲಿ ಪೊಲೀಸರನ್ನೇ ಶಿಮ್ಲಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಎರಡೂ ಖಾಕಿ ಪಡೆಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಚರ್ಚೆಗೂ ಗ್ರಾಸವಾಗಿದೆ. ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಏಕಾಂಶ್ ಕಪಿಲ್ ಅವರು ನೀಡಿದ ಟ್ರಾನ್ಸಿಟ್ ರಿಮಾಂಡ್...







