ಎಸೆಸೆಲ್ಸಿ 29,397, ಪಿಯುಸಿ 37,337 ವಿದ್ಯಾರ್ಥಿಗಳು ನೋಂದಣಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ – ಕಹಳೆ ನ್ಯೂಸ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ 29,397 ಮಂದಿ ವಿದ್ಯಾರ್ಥಿಗಳು ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 37,337 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಪ್ರೌಢ ಮತ್ತು ಪ.ಪೂ. ಶಿಕ್ಷಣ ಇಲಾಖೆಗಳು ಸಿದ್ಧತೆ ನಡೆಸಿವೆ. ಮಾ.18 ರಿಂದ ಎ.2ರವರೆಗೆ ಎಸೆಸೆಲ್ಸಿ ಪರೀಕ್ಷೆ ಮತ್ತು ಫೆ.28 ರಿಂದ ಮಾ.17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ. ಜಿಲ್ಲೆಯ 524 ಪ್ರೌಢಶಾಲೆಗಳ ಅಭ್ಯರ್ಥಿಗಳು 91...







